ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜಕಾರಣ ಬಿಟ್ಟು ಜ್ಯೋತಿಷ್ಯ ಹೇಳಲಿ. ಅವರು ಇನ್ನು ಮುಂದೆ ನಿರುದ್ಯೋಗಿಗಳಾಗಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ ಕುಮಾರ ಕಟೀಲ್ ಹೇಳಿದರು.
ಕೊಪ್ಪಳ ತಾಲೂಕಿನ ಹಲಗೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಹಿಂದೆ ಅವರು ಹೇಳಿದ ಜ್ಯೋತಿಷ್ಯ ಸುಳ್ಳಾಗಿದೆ.
ಅಪ್ಪನಾಣೆಗೂ ನರೇಂದ್ರ ಮೋದಿ ಪ್ರಧಾನಿ ಆಗಲ್ಲ ಎಂದರು, ಮೋದಿ ಅವರು ಎರಡೆರಡು ಬಾರಿ ಪ್ರಧಾನ ಮಂತ್ರಿಯಾದರು. ಕಳೆದ ಬಾರಿಯೂ ನನ್ನಪ್ಪನಾಣೆ ಯಡಿಯೂರಪ್ಪ ಸಿಎಂ ಆಗಲ್ಲ ಎಂದರು. ಅವರೂ ಸಿಎಂ ಆದರು. ಸಿದ್ದರಾಮಯ್ಯ ಅವರು ರಾಜಕಾರಣಕ್ಕಾಗಿ ಹೀಗೆ ಹೇಳುತ್ತಿದ್ದಾರೆ ಎಂದರು.
ಕಾಂಗ್ರೆಸ್ ಗೆ ಭಯದ ವಾತಾವರಣ ಸೃಷ್ಟಿಯಾಗಿದೆ. ಇಷ್ಟೆಲ್ಲ ಹೇಳುವ ಸಿದ್ದರಾಮಯ್ಯ ಅವರಿಗೆ ಕ್ಷೇತ್ರದ ಹುಡುಕಾಟ ನಡೆಸಿದ್ದಾರೆ. ಒಬ್ಬ ಮುಖ್ಯಮಂತ್ರಿ ಅಭ್ಯರ್ಥಿಗೆ ಎಲ್ಲೂ ಕ್ಷೇತ್ರ ಸಿಗುತ್ತಿಲ್ಲ. ಅವರಿಗೆ ಕ್ಷೇತ್ರವೇ ಇಲ್ಲ. ಕ್ಷೇತ್ರದ ಹುಡುಕಾಟ ನಡೆಸಿದ್ದಾರೆ. ಹೀಗಾದರೆ ಅವರ ಪಕ್ಷ ಗೆಲ್ಲುವುದು ಹೇಗೆ? ಅವರಿಗೆ ತಾಕತ್ತಿದ್ದರೆ ನಾನು ಇಂಥ ಕ್ಷೇತ್ರದಲ್ಲಿ ನಿಂತು ಗೆಲ್ಲುವೆ ಎಂದು ಹೇಳಲಿ. ಒಬ್ಬ ಮುಖ್ಯಮಂತ್ರಿ ಅಭ್ಯರ್ಥಿಗೆ ಕ್ಷೇತ್ರವೇ ಇಲ್ಲ ಎನ್ನುವುದು ಹೀನಾಯ ಸ್ಥಿತಿಯನ್ನು ತೋರಿಸುತ್ತದೆ ಎಂದರು.
ಸಿದ್ದರಾಮಯ್ಯ ಬಾದಾಮಿಯಲ್ಲಿ ನಿಲ್ಲಲಿ ಇಲ್ಲವೇ ವರುಣಾ ಕ್ಷೇತ್ರದಲ್ಲಿ ನಿಲ್ಲಲಿ ಅವರನ್ನು ಸೋಲಿಸುತ್ತೇವೆ. ಆ ಕ್ಷೇತ್ರದಲ್ಲಿ ಸಿದ್ದರಾಮಯ್ಯ ನಿಂತು ನೋಡಲಿ. ಅವರನ್ನ ನಾವು ಸೋಲಿಸುತ್ತೇವೆ. ಅವರ ವಿರುದ್ದ ಯಾರನ್ನ ನಿಲ್ಲಿಸಬೇಕು ಎಂದು ನಮ್ಮ ಪಕ್ಷ ನಿರ್ಧಾರ ಮಾಡುತ್ತದೆ ಎಂದರು.
ಕೋಲಾರದಲ್ಲಿ ಸಿದ್ದರಾಮಯ್ಯ ಅವರನ್ನು ಓಡಿಸಿ ಕಳಿಸಿದ್ದಾರೆ. ಅಲ್ಲಿ ನಿಲ್ಲುವುದಿಲ್ಲ ಎಂದು ಅವರೇ ಹೇಳಿದ್ದಾರೆ. ಮುನಿಯಪ್ಪ ಕೋಪದಿಂದ ಕುಳಿತಿದ್ದಾರೆ. ಅಲ್ಲಿ ಅವರು ನಿಂತರೆ ನಾವಲ್ಲ, ಕಾಂಗ್ರೆಸ್ ನವರೇ ಸೋಲಿಸಿ ಕಳುಹಿಸುತ್ತಾರೆ ಎಂದರು