ವಿಜಯನಗರ: ಎಫ್ಡಿಎ(FDA) ಅಧಿಕಾರಿಯೊಬ್ಬರು 65 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೂವಿನ ಹಡಗಲಿಯ ತಹಶಿಲ್ದಾರರ ಕಚೇರಿಯ ಎಫ್ಡಿಎ ವೆಂಕಟಸ್ವಾಮಿ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ನೌಕರ.
ಹಗರನೂರು ಗ್ರಾಮದ ನಿವೃತ್ತ ಶಿಕ್ಷಕ ಲಕ್ಕಪ್ಪ ಎಂಬುವವರು ನಾಲ್ಕು ಎಕರೆ ಜಮೀನಿಗೆ ಸಂಬಂಧಿಸಿದಂತೆ ಪಹಣಿಯಲ್ಲಿ ಕಲಂ 11 ತೆಗೆದು ಹಾಕಲು ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ವೇಳೆ ವೆಂಕಟಸ್ವಾಮಿ 70 ಸಾವಿರ ರೂ. ಹಣ ಬೇಡಿಕೆ ಇಟ್ಟಿದ್ದ.
ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಬಳ್ಳಾರಿ ಹಾಗೂ ಹೊಸಪೇಟೆ ಲೋಕಾಯುಕ್ತ ಡಿವೈಎಸ್ಪಿ, ಇನ್ಸ್ಪೆಕ್ಟರ್ಗಳು ಜಂಟಿಯಾಗಿ ದಾಳಿ ನಡೆಸಿದ್ದಾರೆ. ಇದೀಗ ಲೋಕಾಯುಕ್ತ ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೆಂಕಟಸ್ವಾಮಿಯನ್ನು ಬಂಧಿಸಿದ್ದಾರೆ.
Laxmi News 24×7