Breaking News

ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ; ಮಹಿಳೆ ಮೃತ್ಯು

Spread the love

ಯಾದಗಿರಿ: ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ.

ಸಾವಿತ್ರಮ್ಮ (35) ಮೃತ ಮಹಿಳೆ.

ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿರುವ ಪರಿಣಾಮ ಕಲುಷೀತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣಗೊಂಡಿದೆ.

ಇದುವರೆಗೆ 30 ಜನರಲ್ಲಿ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ. ನಿನ್ನೆ 24 ,ಇಂದು 6 ಜನರಿಗೆ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ.

ಸಾವಿತ್ರಮ್ಮ ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಮೃತಪಟ್ಟಿದ್ದಾರೆ.

ವಾಂತಿ ಭೇದಿ ಉಲ್ಬಣಗೊಂಡು ಯಾದಗಿರಿ ಜಿಲ್ಲಾಸ್ಪತ್ರೆಯಲ್ಲಿ 13 ಜನ ದಾಖಲಾಗಿದ್ದಾರೆ. ತೆಲಂಗಾಣದ ನಾರಾಯಣಪೇಟೆನಲ್ಲಿ 8 , ಮೈಬೂಬನಗರದ ಖಾಸಗಿಯಲ್ಲಿ 4 ವರ್ಷದ ಬಾಲಕ ದಾಖಲಾಗಿದ್ದಾರೆ.


Spread the love

About Laxminews 24x7

Check Also

Job: ಅಗ್ನಿವೀರ ನೇಮಕಾತಿ ಆನ್‌ಲೈನ್ ನೋಂದಣಿ ಪ್ರಾರಂಭ

Spread the loveಬೆಳಗಾವಿ: ಇಲ್ಲಿನ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಫೆ.13ರಿಂದ ಏಪ್ರಿಲ್ 1ರವರೆಗೆ ಬೆಳಗಾವಿ, ಬೀದರ ಕಲಬುರಗಿ, ಕೊಪ್ಪಳ, ರಾಯಚೂರು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ