Breaking News

ರಾಜ್ಯದಲ್ಲಿ ಬಿಜೆಪಿ ಪರ ಅಲೆ: ಬಸವರಾಜ ಬೊಮ್ಮಾಯಿ

Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಬರಲಾರಂಭಿಸಿದ ಬಳಿಕ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಬೀಸಲಾರಂಭಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ಖಾಸಗಿ ಹೊಟೇಲ್ ನಲ್ಲಿ ಬುಧವಾರ ರಾತ್ರಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರು ಮಾತನಾಡಿ, ಆಡಳಿತ ವಿರೋಧಿ ಅಲೆ ಇಲ್ಲ.

ಯಾರೂ ಧೃತಿಗೆಡಬೇಕಾಗಿಲ್ಲ, ನಾವು ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.

ಕಾಂಗ್ರೆಸ್ ನವರ ಈಗಿನ ಅಬ್ಬರ ಚುನಾವಣೆ ವೇಳೆಗೆ ಇರುವುದಿಲ್ಲ ಎಂದೂ ಅವರು ಹೇಳಿದರು.

ಮಾರ್ಚ್ 1, 2 ಮತ್ತು 3 ರಂದು ರಥಯಾತ್ರೆಗೆ ಚಾಲನೆ ನೀಡಲಾಗುವುದು. ಮಾ. 1 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಾಲನೆ ನೀಡಿದರೆ, ಮಾ. 2 ರಂದು ಬೆಳಗಾವಿ ಜಿಲ್ಲೆಯ ನಂದಗಢದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡುವರು. ಮಾ. 3 ರಂದು ಬೆಂಗಳೂರು ಮತ್ತು ಬಸವ ಕಲ್ಯಾಣದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಚಾಲನೆ ನೀಡಲಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಪವರ್ ಪಾಯಿಂಟ್ ಪ್ರೆಸೆಂಟೇಷನ್ ಮೂಲಕ ಶಾಸಕರಿಗೆ ರಥಯಾತ್ರೆ ಮತ್ತು ಸಮಾವೇಶಗಳ ವಿವರ ನೀಡಿದರು.


Spread the love

About Laxminews 24x7

Check Also

ಇಂಜಿನಿಯರ್​​​ ವಿದ್ಯಾರ್ಥಿಗಳೇ ಮಾಡಿದ ಮಾದರಿ ವಿಮಾನಗಳ ಏರ್​​ ಶೋ: ಸಹ್ಯಾದ್ರಿ ಗ್ರೌಂಡ್​ನ​ ಬಾನಲ್ಲಿ ಹಾರಾಡಿದ ಲೋಹದ ಹಕ್ಕಿಗಳು

Spread the loveಮಂಗಳೂರು(ದಕ್ಷಿಣ ಕನ್ನಡ): ವಿಮಾನ ತಯಾರಿ ಬಲು ಕ್ಲಿಷ್ಟ ಕಾರ್ಯ. ಅಂತಹುದರಲ್ಲಿ ಮಂಗಳೂರಿನ ಸಹ್ಯಾದ್ರಿ ಇಂಜಿನಿ ಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ