Breaking News

‘ಮಠ, ಮಂದಿರ ನಿರ್ಮಾಣದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ಬೆಳೆಯುತ್ತದೆ’:ಶಿಂದೊಗಿ ಮುಕ್ತಾನಂದ ಸ್ವಾಮೀಜಿ

Spread the love

ರಗಟ್ಟಿ: ‘ಮಠ, ಮಂದಿರ ನಿರ್ಮಾಣದಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ, ಪೂಜಾ ಭಾವನೆ ಬೆಳೆಯುತ್ತದೆ’ ಎಂದು ಶಿಂದೊಗಿ ಮುಕ್ತಾನಂದ ಸ್ವಾಮೀಜಿ ಹೇಳಿದರು.

ಸಮೀಪದ ರೈನಾಪೂರದಲ್ಲಿ ಗುರುವಾರ ದುರ್ಗಾದೇವಿ ದೇವಸ್ಥಾನ ಆವರಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ, ಸಿ, ಟ್ರಸ್ಟ್ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದಿಂದ ಆಯೋಜಿಸಿದ್ದ ಸಾಮೂಹಿ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

 

ನಿವೃತ್ತ ಬಸವೇಶ್ವರ ಪೌಢ ಶಾಲೆ ಮುಖ್ಯ ಶಿಕ್ಷಕ ರಂಗಪ್ಪ ಜೂಗನವರ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದ್ದು, ಎಲ್ಲ ವರ್ಗಗಳ ಜನರಿಗೆ ನೆರವಾಗುತ್ತದೆ ಎಂದರು.

ಧರ್ಮಸ್ಥಳದ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ, ಮಾಜಿ ಸ್ಯೆನಿಕ ಮಲ್ಲಪ್ಪ ಅಳಗೋಡಿ, ಪ್ರಗತಿಪರ ರೈತ ಗೋವಿಂದ ಕಳ್ಳಿಗುದ್ದಿ, ಧರ್ಮಸ್ಥಳದ ಯೋಜನಾಧಿಕಾರಿ ಸತೀಶ ಡಿ. ಇದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ