ಅಥಣಿ: ಪಟ್ಟಣದಲ್ಲಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಶುಕ್ರವಾರ ಪಲ್ಟಿಯಾಗಿದ್ದು, ವಾಹನದಡಿ ಸಿಲುಕಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಅಗ್ರಾಣಿ ಇಂಗಳಗಾವಿಯ ಕಲ್ಪನಾ ಮಾದರ, ಬಣಜವಾಡದ ಶ್ರೀದೇವಿ ಮಾಂಗ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿವೈಎಸ್‌ಪಿ ಶ್ರೀಪಾದ ಜಲ್ದೆ, ಸಿಪಿಐ ರವೀಂದ್ರ ನಾಯ್ಕೊಡಿ, ಪಿಎಸ್‌ಐ ಶಿವಶಂಕರ ಮುಖರಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪೊಲೀಸರು ಹಾಗೂ ಸ್ಥಳೀಯರು ಜೆಸಿಬಿ ಯಂತ್ರದ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು.
Laxmi News 24×7