Home / ರಾಜಕೀಯ / ಧರ್ಮಸ್ಥಳದಲ್ಲಿ ಭಕ್ತರಿಂದ ಭಕ್ತಿ‌ ಸಡಗರದಿಂದ ಅಹೋರಾತ್ರಿ ಶಿವರಾತ್ರಿ ಜಾಗರಣೆ

ಧರ್ಮಸ್ಥಳದಲ್ಲಿ ಭಕ್ತರಿಂದ ಭಕ್ತಿ‌ ಸಡಗರದಿಂದ ಅಹೋರಾತ್ರಿ ಶಿವರಾತ್ರಿ ಜಾಗರಣೆ

Spread the love

ಬೆಳ್ತಂಗಡಿ: ಜಗತ್ತಿನ ದೋಷ ಪರಿಹರಿಸಬಲ್ಲ ಏಕಮಾತ್ರ ದೇವ ವಿಷಕಂಠ. ನಮ್ಮ ಹೃದಯಶುದ್ಧವಾಗಿದ್ದಲ್ಲಿ ಭಾವನೆ, ಕೂಗು ಭಗವಂತನಿಗೆ ವ್ಯವಹರಿಸುತ್ತದೆ. ಪರಿಶುದ್ಧ ಮನ, ವಚನ, ಕಾಯದಿಂದ ನಿತ್ಯವೂ ಆರಾಧಿಸುವ ದೇವರ ಭಕ್ತಿಗೆ ಅಪಾರ ಶಕ್ತಿ ಪರಿಭ್ರಮಿಸುತ್ತದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನುಡಿದರು.

 

ಶಿವರಾತ್ರಿ ಜಾಗರಣೆ ಪ್ರಯುಕ್ತ ಧರ್ಮಸ್ಥಳ ಪ್ರವಚನ ಮಂಟಪದಲ್ಲಿ ಫೆ.18 ರಂದು ಸಂಜೆ 6.30 ಗಂಟೆಗೆ ಅಹೋರಾತ್ರಿ ಶಿವಪಂಚಾಕ್ಷರಿ ಪಠಣಕ್ಕೆ ದೀಪ ಬೆಳಗಿ ಚಾಲನೆ ನೀಡಿ ಆಶೀರ್ವದಿಸಿದರು.

ಈ ವೇಳೆ ಡಾ.ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಮಾಣಿಲ ಶ್ರೀಧಾಮದ ಮೋಹನದಾಸ ಸ್ವಾಮೀಜಿ, ಪಾದಯಾತ್ರಿಗಳ ಸಂಘದ ನಾಯಕ ಬೆಂಗಳೂರಿನ ಹನುಮಂತಪ್ಪ ಗುರೂಜಿ ಮತ್ತು ಎಸ್. ಮರಿಯಪ್ಪ ಉಪಸ್ಥಿತರಿದ್ದರು.

ಬೆಂಗಳೂರು, ಮೈಸೂರು, ಹಾಸನ, ಮಂಡ್ಯ ಮೊದಲಾದ ಅನೇಕ ಊರುಗಳಿಂದ ಪ್ರತಿವರ್ಷದಂತೆ ಸಾವಿರಾರು ಮಂದಿ ಶ್ರದ್ಧಾ-ಭಕ್ತಿಯಿಂದ 50 ಸಾವಿರಕ್ಕೂ ಮಿಕ್ಕಿ ಭಕ್ತರು ಪಾದಯಾತ್ರೆಯಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ್ದರು.


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ