ಬೆಂಗಳೂರು : ಐಪಿಎಸ್ ಅಧಿಕಾರಿ ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಜಟಾಪಟಿ ಮುಂದುವರೆದಿದೆ.
ಡಿ. ರೂಪಾ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂಬ ರೋಹಿಣಿ ಸಿಂಧೂರಿ ಹೇಳಿಕೆಗೆ ರೂಪಾ ಪ್ರತಿಕ್ರಿಯೆ ನೀಡಿದ್ದು,, ನಾನು ಬಿಡಲ್ಲ ನಿಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಹೇಳಿದ್ದಾರೆ.
ನಿಮ್ಮ ಬಣ್ಣ ಬಯಲಾಯಿತು ಎಂದು ಬೇಸರಗೊಂಡಿದ್ದೀರಾ..? ಹತಾಶೆ ಯಾರಿಗೆ ಆಗಿದ್ದು ನನಗಾ ನಿಮಗಾ..? ನಾನು ನಿಮ್ಮನ್ನು ಎಕ್ಸ್ ಪೋಸ್ ಮಾಡಿದ್ದೇನೆ ಎಂಬ ಕಾರಣಕ್ಕೆ ನನಗೆ ಮಾನಸಿಕ ಸ್ಥಿಮಿತತೆ ಇಲ್ಲ ಎಂದು ಹೇಳುತ್ತೀರಾ..? ನನ್ನ ಬಳಿ ಕ್ಷಮೆ ಕೇಳದೇ ಇದ್ದರೆ ನಿಮ್ಮ ಮೇಲೆ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಸಿದ್ದಾರೆ.
ನೀವು ನಿಮ್ಮ ಮೋಜಿಗೆ ಸ್ವಿಮ್ಮಿಂಗ್ ಫೂಲ್ ಕಟ್ಟಿಸಿದ್ದು, ನೀವು ಭ್ರಷ್ಟಾಚಾರ ಮಾಡಿದ ಚಾಟ್ ಗಳು ನನ್ನ ಬಳಿ ಇದೆ. ನೀವು ಸೇವಾ ನಿಯಮ ಉಲ್ಲಂಘಿಸಿದ ಬಗ್ಗೆ ಕಾನೂನು ಕ್ರಮ ಆಗಬೇಕು ಎಂದಿದ್ದಾರೆ. ಡಿ. ರೂಪಾ ಆರೋಪಕ್ಕೆ ತಿರುಗೇಟು ನೀಡಿರುವ ರೋಹಿಣಿ ಸಿಂಧೂರಿ ವಾಟ್ಸಪ್ ಸ್ಟೇಟಸ್ ಗಳಲ್ಲಿ ಹಾಕಿದ್ದ ಫೋಟೋಗಳನ್ನು ಬಳಸಿ ರೂಪಾ ನಿಂದನೆ ಮಾಡಿದ್ದಾರೆ. ನಾನು ಯಾವ ಅಧಿಕಾರಿಗೆ ಫೋಟೋ ಕಳುಹಿಸಿದ್ದೆ ಅಂತ ಹೆಸರು ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದ್ದಾರೆ. ಆ ಬಗ್ಗೆ ತನಿಖೆ ನಡೆಯಬೇಕೆಂದು ರೋಹಿಣಿ ಸಿಂಧೂರಿ ಒತ್ತಾಯಿಸಿದ್ದಾರೆ.