ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಫೆ.27ರಂದು ಬೆಳಗಾವಿಗೆ ಆಗಮಿಸಲಿದ್ದು, ಹೈಟೆಕ್ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ.
ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ನಗರದಲ್ಲಿ ಬಿಜೆಪಿ ನಾಯಕರು ಭಾನುವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.
‘ಫೆ.27ರಂದು ಶಿವಮೊಗ್ಗದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮೋದಿ ಭಾಗವಹಿಸುವರು. ಬಳಿಕ, ಇಲ್ಲಿಗೆ ಬಂದು ರೈಲ್ವೆ ನಿಲ್ದಾಣ ಉದ್ಘಾಟಿಸುವರು. ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು. ಇದರೊಂದಿಗೆ ರೋಡ್ ಷೋ ನಡೆಸುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ’ ಎಂದು ಪಕ್ಷದ ರಾಜ್ಯ ವಕ್ತಾರ ಎಂ.ಬಿ.ಝಿರಲಿ ತಿಳಿಸಿದರು.
ಶಾಸಕ ಅಭಯ ಪಾಟೀಲ, ಅನಿಲ ಬೆನಕೆ ಹಾಗೂ ಸಂಸದೆ ಮಂಗಲಾ ಅಂಗಡಿ ಇದ್ದರು.
Laxmi News 24×7