Breaking News

ಡಿ.ರೂಪಾ, ರೋಹಿಣಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಿಎಂಗೆ ಸಲಹೆ: ಪ್ರಲ್ಹಾದ ಜೋಶಿ

Spread the love

ಧಾರವಾಡ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಅಧಿಕಾರಿ ಡಿ. ರೂಪಾ ನಡುವಿನ ಆರೋಪ, ಪ್ರತ್ಯಾರೋಪದಂತ ಬೆಳವಣಿಗೆಗೆ ಕಡಿವಾಣ ಹಾಕುವುದು ಅಗತ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅಭಿಪ್ರಾಯಪಟ್ಟರು.

ಕೇಂದ್ರ ಲಲಿತಕಲಾ ಅಕಾಡೆಮಿ ಪ್ರಾದೇಶಿಕ ಕಚೇರಿಗೆ ಸೋಮವಾರ ನಡೆದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು.

 

 

‘ಪರಸ್ಪರ ದೂರುಗಳಿದ್ದರೆ ಸಂಬಂಧಪಟ್ಟವರಿಗೆ ದೂರು ಸಲ್ಲಿಸಬೇಕಿತ್ತು. ಆದರೆ ಈ ರೀತಿ ಪತ್ರಿಕಾ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗೆ ಹೇಳಲಾಗುವುದು’ ಎಂದು ಹೇಳಿದರು.

‘ರಾಜಕೀಯದಲ್ಲಿ ವಿವಿಧ ಪಕ್ಷಗಳ ನಾಯಕರು ನೀಡುವ ಹೇಳಿಕೆ ರಾಜಕೀಯ ವ್ಯವಸ್ಥೆಯ ಭಾಗ. ಆದರೆ ಅಧಿಕಾರಿಗಳು ಈ ರೀತಿ ಪರಸ್ಪರ ಕೆಸರೆರಚುತ್ತಿರುವುದು ಸರಿಯಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ವಿಷಯ ಅತ್ಯಂತ ದುರ್ದೈವ. ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು’ ಎಂದು ಜೋಶಿ ಹೇಳಿದರು.


Spread the love

About Laxminews 24x7

Check Also

ಪ್ರಧಾನಿ ಮೋದಿ ಒಂದು ದಿನ ತಮ್ಮ ಕೃತ್ಯಗಳಿಗೆ ಪಶ್ಚಾತ್ತಾಪ ಪಡುತ್ತಾರೆ: ಮಲ್ಲಿಕಾರ್ಜುನ ಖರ್ಗೆ

Spread the loveಕಲಬುರಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಾವಣೆ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುವಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ