Breaking News

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬೇಡಿಕೆ ಮಾತುಕತೆ

Spread the love

ಬೆಂಗಳೂರು: ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನ ಪರಿಷ್ಕರಣೆ ನಡೆಸುವಂತೆ ಬೇಡಿಕೆ ಇಟ್ಟಿರುವ ಸಂಘಟನೆಗಳ ಮುಖಂಡರೊಂದಿಗೆ ಮಾತುಕತೆ ನಡೆಸಿ, ಹಣಕಾಸಿನ ಇತಿಮಿತಿಯೊಳಗೆ ಅನುಕೂಲ ಮಾಡಿಕೊಡುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

 

ವಿಧಾನಸೌಧದ ಮಹಾದ್ವಾರದ ಬಳಿ ವೋಲ್ವೋ ಮಲ್ಟಿ ಆಕ್ಸಲ್ ಬಸ್ ಗಳ ಲೋಕಾರ್ಪಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಗೆ‌ ಈ ವರ್ಷ ಒಂದು ಸಾವಿರ ಕೋಟಿ ರೂ ಬಿಡುಗಡೆ ಮಾಡಲಾಗಿದೆ.

ಬಜೆಟ್ ನಲ್ಲಿ ಘೋಷಿಸಿರುವ ದುಡಿಯುವ ಮಹಿಳೆಯರಿಗೆ ಉಚಿತ ಬಸ್ ಪಾಸ್ ಏಪ್ರಿಲ್‌ ಒಂದರಿಂದ ಆರಂಭಿಸಲು ಸಿದ್ಧತೆ ಮಾಡಿಕೊಳ್ಳಬೇಕು. ಹಳ್ಳಿಗಳ ಶಾಲಾ ಮಕ್ಕಳಿಗೆ ಮಿನಿ ಬಸ್ ಗಳನ್ನು ಶೈಕ್ಷಣಿಕ ವರ್ಷಾರಂಭದಿಂದ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ‌ ಸೂಚಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ