Breaking News

ರಾಜಕೀಯ ರಿ ಎಂಟ್ರಿ’ ಮುಂದೂಡಿದ ನಟ ಅನಂತ್ ನಾಗ್ : ‘ಬಿಜೆಪಿ’ ಸೇರ್ಪಡೆ ಕಾರ್ಯಕ್ರಮಕ್ಕೆ ಗೈರು

Spread the love

ಬೆಂಗಳೂರು : ಸ್ಯಾಂಡಲ್ ವುಡ್ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗಿತ್ತು, ಆದರೆ ಕಾರಣಾಂತರದಿಂದ ಬಿಜೆಪಿ ಸೇರ್ಪಡೆಯನ್ನು ಸದ್ಯಕ್ಕೆ ಮುಂದೂಡಿದ್ದಾರೆ.

ಹೌದು. ಸ್ಯಾಂಡಲ್ ವುಡ್ ಹಿರಿಯ ನಟ ಮತ್ತು ಮಾಜಿ ಸಚಿವ ಅನಂತ್ ನಾಗ್ ಅವರು ಇಂದು ಸಂಜೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಸಂಜೆ 4.30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪಕ್ಷಕ್ಕೆ ಸೇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ ನಟ ಅನಂತ್ ನಾಗ್ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಬಿಜೆಪಿ ಸೇರ್ಪಡೆಯನ್ನು ಸದ್ಯಕ್ಕೆ ಮುಂದೂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕೊನೇ ಕ್ಷಣದಲ್ಲಿ ನಟ ಅನಂತ್ ನಾಗ್ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ. ಮುಂದಿನ ವಾರ ಅನಂತ್ ನಾಗ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಅನಂತ್ ನಾಗ್ ಅವರು ರಾಜಕೀಯ ಪ್ರವೇಶಿಸಿ ತುಂಬಾ ವರ್ಷಗಳ ಕಳೆದಿವೆ. ಜೆ.ಎಚ್. ಪಟೇಲ್ ಸರ್ಕಾದಲ್ಲೇ ಅನಂತ್ ನಾಗ್ ಅವರು ಸಚಿವರಾಗಿ ಕೆಲಸ ನಿಭಾಯಿಸಿದ್ದರು. ಶಾಸಕ, ಪರಿಷತ್ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಅನಂತ್ ನಾಗ್, ಜೆ.ಎಚ್. ಪಟೇಲ್ ಸರ್ಕಾರದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯನಿರ್ವಹಿಸಿದ ಅನುಭವ ಇದೆ.ಇನ್ನು ಅವರು 2004ರಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿ ಅವರು ಸೋಲನ್ನ ಅನುಭವಿಸಿದ್ದರು. ಬಹು ದಿನಗಳ ನಂತರ ಮತ್ತೆ ರಾಜಕೀಯ ಪ್ರವೇಶ ಮಾಡುವ ಮನಸ್ಸು ಮಾಡಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ