Breaking News

ತಾವು ಮಾಡಿದ್ದ ವಾಂತಿಯನ್ನು ತಾವೇ ತಿನ್ನುವಂತಾಗಿದೆ: ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

Spread the love

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಸರಣಿ ಟ್ವೀಟ್​ ಮೂಲಕ ವಾಗ್ದಾಳಿ ನಡೆಸಿದ್ದಾರೆ.

 

ಮಾಂಸ ತಿನ್ನುವುದು ತಿನ್ನದಿರುವುದು, ದೇವಸ್ಥಾನಗಳಿಗೆ ಹೋಗುವುದು ಹೋಗದಿರುವುದು ಅವರವರ ವೈಯಕ್ತಿಕ ಆಯ್ಕೆಗಳಾಗಿವೆ. ಇದು ರಾಜಕೀಯ ಚರ್ಚೆಯ ವಸ್ತು ಆಗಬಾರದು. ರಾಜಕೀಯ ನಾಯಕರು ಜನತೆಯ ಕಲ್ಯಾಣ, ರಾಜ್ಯದ ಅಭಿವೃದ್ದಿ ಬಗ್ಗೆ ಚರ್ಚಿಸಬೇಕು. ಪರದೂಷಣೆಯಲ್ಲಿ ನಿರತರಾಗಿರುವ ಸಿಟಿ ರವಿ ಅವರಿಗೆ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಡಿಯೋ ಜಗತ್ತಿಗೆಲ್ಲ ಸತ್ಯ ಸಾರುತ್ತಿರುವಾಗ ‘ತಾನು ತಿಂದದ್ದು ನಿಜ, ದೇವಸ್ಥಾನದ ಒಳಪ್ರವೇಶಿಸಿಲ್ಲ, ರಸ್ತೆಯಲ್ಲಿಯೇ ನಿಂತು ಕೈಮುಗಿದಿದ್ದೆ” ಎಂಬ ಸಿಟಿ ರವಿ ಅವರ ವಾದ, ಸದಾ ಹಸಿಹಸಿ ಸುಳ್ಳು ಹೇಳುವ ಅವರ ಹುಟ್ಟು ಗುಣಕ್ಕೆ ತಕ್ಕ ಹಾಗೆ ಇದೆ


Spread the love

About Laxminews 24x7

Check Also

ಡಿಸಿಸಿ ಬ್ಯಾಂಕ್ ಚುನಾವಣೆಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ನಾಮಪತ್ರ ಸಲ್ಲಿಕೆ

Spread the love ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಬೆಳಗಾವಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ನನ್ನ ನಾಮಪತ್ರವನ್ನು ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ