Breaking News

ರೈತರ ಖಾತೆಗೆ ಕಿಸಾನ್ ಸಮ್ಮಾನ್ ನಿಧಿ: ಸಚಿವೆ ಶೋಭಾ ಕರಂದ್ಲಾಜೆ

Spread the love

ಬೆಳಗಾವಿ: ಫೆ.27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಿಸಾನ್ ಸಮ್ಮಾನ್ ನಿಧಿಯನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಎಂದು ಕೇಂದ್ರ ಕೃಷಿ ಇಲಾಖೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

 

ಪ್ರಧಾನಮಂತ್ರಿಗಳ ಕಾರ್ಯಕ್ರಮ ನಡೆಯಲಿರುವ ಬಿ.ಎಸ್.ಯಡಿಯೂರಪ್ಪ ಮಾರ್ಗದಲ್ಲಿರುವ ಮಾಲಿನಿ ಸಿಟಿಯಲ್ಲಿ ವೇದಿಕೆ ನಿರ್ಮಾಣ ಮತ್ತಿತರ ಸಿದ್ಧತೆಗಳನ್ನು ಗುರುವಾರ ಪರಿಶೀಲಿಸಿ ಮಾತನಾಡಿದ ಅವರು, ಇದು ಸಂಪೂರ್ಣ ರೈತರ ಕಾರ್ಯಕ್ರಮವಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಹಾಗೂ ವಿಶೇಷವಾಗಿ ರೈತ ಮಹಿಳೆಯರನ್ನು ಸೇರಿಸಲಾಗುವುದು ಎಂದರು.

ಮೊದಲ ಬಾರಿ ಪ್ರಧಾನಮಂತ್ರಿಗಳು ಕಿಸಾನ್ ಸಮ್ಮಾನ್ ನಿಧಿಯನ್ನು ಬೆಳಗಾವಿಯ ಕಾರ್ಯಕ್ರಮದಲ್ಲಿ ರೈತರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ. ರೋಡ್ ಶೋ ಮಾರ್ಗ ಇನ್ನೂ ಅಂತಿಮಗೊಂಡಿಲ್ಲ; ಎಸ್.ಪಿ.ಜಿ. ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದುಎಂದು ಹೇಳಿದರು.

ಕಾರ್ಯಕ್ರಮದ ಸಿದ್ಧತೆ ಹಾಗೂ ವೇದಿಕೆ ನಿರ್ಮಾಣದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಾಲ್ಕೂ ದಿಕ್ಕಿನಲ್ಲಿ ಊಟ ಹಾಗೂ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ