Breaking News

7 ಐಪಿಎಸ್​ ಅಧಿಕಾರಿಗಳ ವರ್ಗಾವಣೆ; ಯಾರು, ಎಲ್ಲಿಗೆ? ಇಲ್ಲಿದೆ ವಿವರ.

Spread the love

ಬೆಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರನ್ನು ಡಿಐಜಿ ರೈಲ್ವೆ ಹುದ್ದೆಗೆ ನಿಯೋಜಿಸಿದ ಸರ್ಕಾರ, ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಹಿರಿಯ ಎಸ್‌ಪಿ ಕುಲದೀಪ್ ಕುಮಾರ್ ಜೈನ್ ಅವರನ್ನು ನೇಮಿಸಿದೆ.

 

ಬೆಂಗಳೂರು ನಗರಕ್ಕೆ ಹೊಸದಾಗಿ ದಕ್ಷಿಣ (ಸಂಚಾರ) ವಿಭಾಗವನ್ನು ಸೃಜಿಸಿ ಮಹಮ್ಮದ್ ಸುಜೀತಾ ನೇಮಕ ಮಾಡಿದೆ. ಉಳಿದಂತೆ ದೆಕ್ಕಾ ಕಿಶೋರ್ ಬಾಬು- ಎಸ್‌ಪಿ ರಾಜ್ಯ ಗುಪ್ತದಳ, ಡಾ. ಕೋನಾ ವಂಶಿಕೃಷ್ಣ- ಎಸ್‌ಪಿ ವೈರ್‌ಲೆಸ್, ಮಹಮ್ಮದ್ ಸುಜೀತಾ – ಡಿಸಿಪಿ ದಕ್ಷಿಣ ವಿಭಾಗ ಸಂಚಾರ ಬೆಂಗಳೂರು, ಅರುಣಾಗ್ಷು ಗಿರಿ- ಡಿಸಿಪಿ ಸಿಎಆರ್ (ಕೇಂದ್ರ) ಬೆಂಗಳೂರು, ಯಶೋಧ ವಂಟಗೋಡಿ- ಎಸ್‌ಪಿ ಕೊಪ್ಪಳಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಪ್ರೀತಿಸಿ ಮದುವೆ – ಲಾಡ್ಜ್‌ನಲ್ಲಿ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಂದು ಗಂಡ ಪರಾರಿ

Spread the loveಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ