Breaking News

ಮನೆಮನೆಗೂ ತೆರಳಿ ಕಮಲ ಮತ್ತು ಮೋದಿ ಹೆಸರಲ್ಲಿ ಪ್ರಚಾರ ಮಾಡಬೇಕು’ ಎಂದು ಗೃಹ ಸಚಿವ ಅಮಿತ್‌ ಶಾ

Spread the love

ಬಳ್ಳಾರಿ): ‘ಮನೆಮನೆಗೂ ತೆರಳಿ ಕಮಲ ಮತ್ತು ಮೋದಿ ಹೆಸರಲ್ಲಿ ಪ್ರಚಾರ ಮಾಡಬೇಕು’ ಎಂದು ಗೃಹ ಸಚಿವ ಅಮಿತ್‌ ಶಾ ಸಂಡೂರಿನಲ್ಲಿ ಗುರುವಾರ ಬಳ್ಳಾರಿ ವಿಭಾಗದ ನಾಲ್ಕು ಜಿಲ್ಲೆಗಳ ಪ್ರಮುಖರಿಗೆ ತಾಕೀತು ಮಾಡಿದ್ದಾರೆ.

ಸಂಡೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕ‌ಲ್ಪ ಯಾತ್ರೆಯಲ್ಲಿ ಭಾಗವಹಿಸಿದ ಬಳಿಕ ನಡೆದ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಬಿಜೆಪಿ ಪ್ರಮುಖರ ಸಭೆಯಲ್ಲಿ ಬಿಡುವಿಲ್ಲದ ಪ್ರಚಾರದಲ್ಲಿ ತೊಡಗುವಂತೆ ಪಕ್ಷದ ಟಿಕೆಟ್‌ ಆಕಾಂಕ್ಷಿಗಳಿಗೂ ಸೂಚಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 22 ವಿಧಾನಸಭಾ ಕ್ಷೇತ್ರಗಳಿವೆ. ಇದರಲ್ಲಿ ಕನಿಷ್ಠ 20 ಸ್ಥಾನಗಳನ್ನಾದರೂ ಗೆಲ್ಲುವ ‍ಪ್ರಯತ್ನ ಮಾಡಬೇಕು. ಪಕ್ಷ ಹಾಗೂ ಸರ್ಕಾರ ಒಟ್ಟುಗೂಡಿ ಕೆಲಸ ಮಾಡಿದರೆ ಇದೇನು ಕಷ್ಟವಲ್ಲ ಎಂದು ಶಾ ಅಭಿಪ್ರಾಯಪಟ್ಟರು.

ಪ್ರತಿಯೊಂದು ಕ್ಷೇತ್ರದಲ್ಲೂ ಟಿಕೆಟ್‌ಗಾಗಿ ತೀವ್ರ ಪೈ‍ಪೋಟಿ ನಡೆಯುತ್ತಿದೆ. ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌ ಕೊಡಬೇಕು ಎಂಬುದನ್ನು ಪಕ್ಷದ ಕೇಂದ್ರ ಸಮಿತಿ ತೀರ್ಮಾನಿಸಲಿದೆ ಎಂದು ಸಚಿವರು ಹೇಳಿದರು.

‍ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 2-3 ಗ್ರಾಮಗಳಿಗೊಂದರಂತೆ ಕ್ಲಸ್ಟರ್‌ ರಚಿಸಬೇಕು. ಶಾಸಕರು ಕ್ಲಸ್ಟರ್‌ಗಳ ಮೂಲಕ ಜನರ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಬೇಕು. ‍ಪಕ್ಷದ ಯುವ ಕಾರ್ಯಕರ್ತರು ಬೈಕ್‌ ರ್‍ಯಾಲಿ ನಡೆಸಬೇಕು ಎಂದರು.

ಬಿಜೆಪಿ ಮಹಿಳಾ ಮೋರ್ಚಾವನ್ನು ಪ್ರತಿ ಕ್ಷೇತ್ರದಲ್ಲೂ ಬಲಪಡಿಸಬೇಕು. ಸ್ವಸಹಾಯ ಸಂಘ, ಸ್ತ್ರೀ ಶಕ್ತಿ ಸಂಘಗಳ ಕಾರ್ಯಕರ್ತರನ್ನು ಸಂಘಟಿಸಿ ಸರ್ಕಾರದ ಯೋಜನೆಗಳನ್ನು ಮನವರಿಕೆ ಮಾಡಿಕೊಡಬೇಕು ಎಂದು ಅವರು ಕಿವಿಮಾತು ಹೇಳಿದರು.

ರೆಡ್ಡಿ ಹೊಸ ಪಕ್ಷದ ಪ್ರಸ್ತಾಪ: ಬಿಜೆಪಿ ಪ್ರಮುಖರ ಸಭೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೊಸ ಪಕ್ಷ ಕುರಿತು ಪ್ರಸ್ತಾಪವಾಯಿತು. ‘ನನ್ನ ವಿರುದ್ಧ ನನ್ನ ಸೊಸೆಯೇ ಸ್ಪರ್ಧೆ ಮಾಡುತ್ತಿದ್ದಾರೆ’ ಎಂದು ಬಳ್ಳಾರಿ ನಗರ ಶಾಸಕ ಸೋಮಶೇಖರ ರೆಡ್ಡಿ ಆತಂಕ ವ್ಯಕ್ತಪಡಿಸಿದರು. ‘ಎಲ್ಲ ಬೆಳವಣಿಗೆ ನನ್ನ ಗಮನದಲ್ಲಿದೆ. ನಿಮ್ಮ ಪಾಡಿಗೆ ನೀವು ಕೆಲಸ ಮಾಡಿ. ಪಕ್ಷ ಎಲ್ಲವನ್ನೂ ನೋಡಿಕೊಳ್ಳುತ್ತದೆ’ ಎಂದು ಶಾ ಭರವಸೆ ನೀಡಿದರು.


Spread the love

About Laxminews 24x7

Check Also

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಆರೋಪಿ ಮೇಲೆ ಫೈರಿಂಗ್

Spread the loveಬಳ್ಳಾರಿ, ಜನವರಿ 16: ಬಳ್ಳಾರಿ ಜಿಲ್ಲೆಯ ತೋರಣಗಲ್‌ನಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ