Breaking News

ಕಾಂಗ್ರೆಸ್ ಪ್ರಮುಖ ಸಭೆಗೆ ಗಾಂಧಿ ಕುಟುಂಬದ ಗೈರು; ಖರ್ಗೆಗೆ ಫುಲ್ ಪವರ್

Spread the love

ಹೊಸದಿಲ್ಲಿ: ಛತ್ತೀಸ್‌ಗಡದ ರಾಯ್ಪುರದಲ್ಲಿ ಇಂದು ನಡೆಯುವ ಕಾಂಗ್ರೆಸ್ ನ ಹಾಥ್‌ ಸೇ ಹಾಥ್‌ ಜೋಡೋ ಅಧಿವೇಶನದ ಪ್ರಮುಖ ಸಭೆಗೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಗೈರಾಗಲಿದ್ದಾರೆ ಎಂದು ವರದಿಯಾಗಿದೆ.

 

ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಂಪೂರ್ಣ ಸ್ವಾತಂತ್ಯ ನೀಡುವ ಉದ್ದೇಶದಿಂದ ಗಾಂಧಿ ಕುಟುಂಬ ಈ ನಿರ್ಧಾರ ಮಾಡಿದೆ ಎನ್ನಲಾಗಿದೆ. ಆದಾಗ್ಯೂ ಸಮಾವೇಶದ ಉಳಿದ ಭಾಗಕ್ಕೆ ಹಾಜರಾಗುತ್ತಾರೆ. ಇದರಲ್ಲಿ ಮುಂದಿನ ವರ್ಷದ ಚುನಾವಣೆಗೆ ತಯಾರಿಯ ಬಗ್ಗೆ ಚರ್ಚೆ ಮಾಡಲಾಗುತ್ತದೆ.

ರಾಯ್ಪುರದಲ್ಲಿ ನಡೆಯಲಿರುವ ಸಭೆಯು ಕಾಂಗ್ರೆಸ್‌ ನ 85ನೇ ಸಂಪುಟ ಸಭೆಯಾಗಿದೆ. ಮೂರು ದಿನಗಳ ಅಧಿವೇಶನದಲ್ಲಿ ಪಕ್ಷವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. 2024 ರ ಲೋಕಸಭೆ ಚುನಾವಣೆಗೆ ಮಾರ್ಗಸೂಚಿಯನ್ನು ರೂಪಿಸುವ ಜೊತೆಗೆ ಬಿಜೆಪಿಯನ್ನು ಎದುರಿಸಲು ಇತರ ವಿರೋಧ ಪಕ್ಷಗಳೊಂದಿಗೆ ಚುನಾವಣಾ ಸಂಬಂಧಕ್ಕಾಗಿ ಕಾರ್ಯತಂತ್ರದ ಕುರಿತು ಅಂತಿಮ ನಿರ್ಧಾರ ಮಾಡಲಾಗುತ್ತದೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ