Breaking News

ನನಗೆ ಬೆದರಿಕೆ ಕರೆ ಬಂದಾಗ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರು:ಯು.ಟಿ ಖಾದರ್

Spread the love

ಬೆಂಗಳೂರು: ಇಂದು ವಿಧಾನಸಭೆ ಕಲಾಪದಲ್ಲಿ ಬಿ.ಎಸ್‌ ಯಡಿಯೂರಪ್ಪ ಕೊನೆಯ ಅಧಿವೇಶದ ಭಾಷಣ ಮಾಡಿದ್ದರು. ಇದಕ್ಕೆ ಯು.ಟಿ.ಖಾದರ್​ ಪ್ರತಿಕ್ರಿಯೆ ನೀಡಿದ್ದಾರೆ.
ನನಗೆ ಬೆದರಿಕೆ ಕರೆ ಬಂದಾಗ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರು ಎಂದು ವಿಧಾನಸಭೆಯಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.

ಬಿ.ಎಸ್‌ ಯಡಿಯೂರಪ್ಪ ರಕ್ಷಣೆ ಕೊಟ್ಟಿದ್ದರಿಂದ ಮುಕ್ತವಾಗಿ ಓಡಾಡಲು ಸಾಧ್ಯವಾಯ್ತು. ಜನರ ಕೆಲಸ ಫುಟ್​​ಬಾಲ್ ರೀತಿ ಆಗಬಾರದು. ಆಧಿಕಾರಿಗಳು ಕೆಲಸ ಮಾಡಬೇಕು, ನಾವು ನೇರಾನೇರ ಇರಬೇಕು. ಎಲ್ಲವನ್ನೂ ಗಳಿಸಿ ಪರಿಸ್ಥಿತಿ ವಿಷಮವಾದರೆ ಪ್ರಯೋಜನ ಆಗಲ್ಲ. ಟೆನ್ಷನ್ ರಹಿತ ರಾಜಕಾರಣ ಆಗಬೇಕು ಎಂದು ಯು.ಟಿ.ಖಾದರ್​ ಹೇಳಿದರು.

ಇತ್ತ, ವಿಧಾನಪರಿಷತ್​ನಲ್ಲಿ ಟಿ.ಎ.ಶರವಣ, ಯಡಿಯೂರಪ್ಪರನ್ನು ಹೊಗಳಿದ್ದಾರೆ. ಯಡಿಯೂರಪ್ಪ ಸ್ಥಾನವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಅದೇ ರೀತಿ ಹೆಚ್.ಡಿ ಕುಮಾರಸ್ವಾಮಿ,ಸಿದ್ದರಾಮಯ್ಯ ಸ್ಥಾನವನ್ನೂ ತುಂಬಲು ಆಗಲ್ಲ ಎಂದರು. ಈ ವೇಳೆ ವಿಧಾನಪರಿಷತ್​​ ಸದಸ್ಯರು ಹೆಚ್.ಡಿ.ದೇವೇಗೌಡರ ಹೆಸರನ್ನು ನೆನಪಿಸಿದರು. ದೇವೇಗೌಡರು ದೇವರು ಬಿಡಿ ಎಂದು ಶರವಣ ಚರ್ಚೆ ಮುಂದುವರಿಸಿದರು ಎಂದರು.

ಇನ್ನು ವಿಧಾನಸಭೆಯಲ್ಲಿ ಸ್ಪೀಕರ್​ ಕಾಗೇರಿ ಅವರನ್ನ ಹಾಡಿಹೊಗಳಿದ್ದಾರೆ. ಸಭಾಧ್ಯಕ್ಷರಾಗಿ ಸದನ ನಡೆಸಿದ ರೀತಿ ಎಲ್ಲರೂ ಮೆಚ್ಚುವಂತಹದ್ದು ಮುಂದಿನ ಅಧಿವೇಶನದಲ್ಲಿ ಸ್ಪೀಕರ್ ಪೀಠದಲ್ಲಿ ಕೂರದೇ ಸಚಿವರಾಗಿ. ಇದನ್ನು ನಾನು ಸಿಎಂಗೆ ಮನವಿ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದ್ರು. ಈ ವೇಳೆ ಬಿ.ಎಸ್​.ಯಡಿಯೂರಪ್ಪ ಮಾತಿಗೆ ಸ್ಪೀಕರ್ ಕಾಗೇರಿ ಧನ್ಯವಾದ ತಿಳಿಸಿದ್ದಾರೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ