Breaking News

SC/ST ಮೀಸಲಾತಿ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Spread the love

ರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್,… ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ SC/ST ಕಾಯ್ದೆ 2023ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್)ಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ನಗರದ ಕೆಎಲ್ಇ ಕಾನೂನು ಕಾಲೇಜಿನ ವಿದ್ಯಾರ್ಥಿ ಮಹೇಶ್ ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರಿದ್ದ ವಿಭಾಗೀಯ ಪೀಠ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. ಮೀಸಲಾತಿ ಹೆಚ್ಚಳ ಮಾಡಿರುವ ಕ್ರಮ ಸಂವಿಧಾನದ ಪರಿಚ್ಛೇದ 14, 15 ಮತ್ತು 16 ಅನ್ನು ಉಲ್ಲಂಘಿಸಿದೆ. ಅಲ್ಲದೇ ಇಂದಿರಾ ಸಹಾನಿ ಪ್ರಕರಣದಲ್ಲಿ ಶೇ. 50ರಷ್ಟು ಮೀಸಲಾತಿ ಮೀರಬಾರದು ಎಂದು ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿಗೆ ತದ್ವಿರುದ್ಧವಾಗಿದೆ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದ್ದಾರೆ.ರಾಜ್ಯ ಸರ್ಕಾರ, ಶಿಕ್ಷಣ ಮತ್ತು ನೇಮಕಾತಿಯಲ್ಲಿ ಎಸ್ಸಿ ಮೀಸಲಾತಿಯನ್ನು ಶೇ.15 ರಿಂದ 17 ಕ್ಕೆ ಮತ್ತು ಎಸ್ ಟಿ ಮೀಸಲಾತಿಯನ್ನು ಶೇ. 3 ರಿಂದ 7ಕ್ಕೆ ಹೆಚ್ಚಿಸಿದೆ. ಸರ್ಕಾರದ ಈ ನಿಯಮ ಶೇ. 50ರಷ್ಟು ಮಿತಿ ಮೀರಿದೆ. ಅಲ್ಲದೇ, ಸುಪ್ರೀಂ ಕೋರ್ಟ್ ನ ತೀರ್ಪನ್ನು ಉಲ್ಲಂಘಿಸಿದಂತಾಗಿದೆ. ಹೀಗಾಗಿ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿರುವ ಕ್ರಮ ಸಂವಿಧಾನ ಬಾಹಿರ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

Spread the love

About Laxminews 24x7

Check Also

ಮೃತ ಸರ್ಕಾರಿ ವೈದ್ಯಾಧಿಕಾರಿ ಕೊಠಡಿಯಲ್ಲಿ ಮಾಟಮಂತ್ರ: ಸಾವಿನ ಸುತ್ತ ಅನುಮಾನದ ಹುತ್ತ

Spread the loveಕೋಲಾರ, ಜುಲೈ 07: ಜಿಲ್ಲೆ ಮಾಲೂರು ತಾಲ್ಲೂಕಿನ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ವಸಂತ್ ಕುಮಾರ್ ಅವರು ತಮ್ಮ ಉತ್ತಮ ಸೇವೆಯಿಂದಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ