Breaking News

ಪ್ರಜಾಕೀಯ ಪಕ್ಷಕ್ಕೆ ಸಿಕ್ಕಿತು ‘ಆಟೋ ರಿಕ್ಷಾ’ ಚಿಹ್ನೆ!

Spread the love

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಚುನಾವಣೆಯ ಕಾವು ರಂಗೇರುತ್ತಿದೆ. ಈಗಾಗಲೇ ಎಲ್ಲಾ ಪಕ್ಷಗಳು ರಾಜ್ಯದಾದ್ಯಂತ ಪ್ರಚಾರ ಕಾರ್ಯ ಆರಂಭಿಸಿವೆ. ಹೊಸ ಹೊಸ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ಧೇಶದಿಂದ ಕ್ಷೇತ್ರದಲ್ಲಿ ನಿರಂತರ ಓಡಾಟ ನಡೆಸುತ್ತಿದ್ದಾರೆ.

ಇದೆಲ್ಲದರ ನಡುವೆ ಜನರಿಗೆ ಕುತೂಹಲ ಕೆರಳಿಸಿರುವುದು ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷ. ಇದೀಗ ಪ್ರಜಾಕೀಯ ಪಕ್ಷಕ್ಕೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.

ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ತಮ್ಮ ಪಕ್ಷದ ಚಿಹ್ನೆಯನ್ನು ನಟ ಉಪೇಂದ್ರ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ‘ನಾಯಕತ್ವ, ಜವಾಬ್ಧಾರಿ ವಹಿಸಿಕೊಳ್ಳಲು ತಯಾರಿರುವ ಮತದಾರರ ಪಕ್ಷದ ಚಿಹ್ನೆ ಆಟೋರಿಕ್ಷಾ. ಇಲ್ಲಿ ಸ್ಪರ್ಧಿಸುತ್ತಿರುವವರಿಂದ ನೀವು ಕೆಲಸ ಮಾಡಿಸುತ್ತೀರಿ ಎಂಬ ನಂಬಿಕೆ ನಿಮಗಿದ್ದರೆ ಮಾತ್ರ ಪ್ರಜಾಕೀಯಕ್ಕೆ ಮತ ನೀಡಿ’ ಎಂದು ಉಪೇಂದ್ರ ಬರೆದುಕೊಂಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ