Breaking News

ಬೆಳಗಾವಿಯಲ್ಲಿ ಫೆ. 27ರಂದು 8 ಕಿ.ಮೀ ರೋಡ್‌ ಶೋ ನಡೆಸಲಿರುವ ಪ್ರಧಾನಿ ಮೋದಿ

Spread the love

ಬೆಳಗಾವಿ: ‘ನಗರದಲ್ಲಿ ಫೆ.27ರಂದು ಪ್ರಧಾನಿ ನರೇಂದ್ರ ಮೋದಿ ಅವರು 8 ಕಿ.ಮೀ.ವರೆಗೆ ರೋಡ್‌ ಶೋ ನಡೆಸಲಿದ್ದಾರೆ. ಇದನ್ನು ನೋಡಲು 3 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.

 

‘ಅಂದು ಮಧ್ಯಾಹ್ನ 1ರ ಸುಮಾರಿಗೆ ‍ಪ್ರಧಾನಿ ನಗರಕ್ಕೆ ಆಗಮಿಸಲಿದ್ದಾರೆ. ಜಿಲ್ಲೆಯ ಜನ ಮೋದಿ ಅವರನ್ನು ನೋಡಲು ಕಾತರರಾಗಿದ್ದಾರೆ. ಅವರೊಂದಿಗೆ ಹೆಜ್ಜೆ ಹಾಕಲಿದ್ದಾರೆ. ವಿಶಾಲವಾದ ರಸ್ತೆಗಳಲ್ಲಿ ಇದೊಂದು ಐತಿಹಾಸಿಕ ರೋಡ್‌ ಶೋ ಆಗಲಿದೆ’ ಎಂದು ಅವರು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ನವೀಕೃತ ರೈಲು ನಿಲ್ದಾಣ, ಡಬ್ಲಿಂಗ್‌ ಸೇರಿ ₹1,122 ಕೋಟಿ ವೆಚ್ಚದ ಕಾಮಗಾರಿ ಹಾಗೂ ಜಲಜೀವನ ಮಿಷನ್‌ ಅಡಿ ಮಾಡಿದ ₹1,130 ಕೋಟಿಯ ಕಾಮಗಾರಿ ಸೇರಿ ಒಟ್ಟು ₹ 2,252 ಕೋಟಿ ವೆಚ್ಚದ ಯೋಜನೆಗಳನ್ನು ಜನರಿಗೆ ಅರ್ಪಿಸಲಿದ್ದಾರೆ’ ಎಂದೂ ಹೇಳಿದರು.

ಮಹದಾಯಿ ಕಾಮಗಾರಿಗೆ ಪ್ರಧಾನಿ ಏಕೆ ಚಾಲನೆ ನೀಡುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಮಹದಾಯಿ ವಿಚಾರದಲ್ಲಿ ಯಾರೂ ಆತಂಕ ಪಡಬೇಕಾಗಿಲ್ಲ.

ಪ್ರಾಧಿಕಾರ ರಚನೆಗೆ ಕೇಂದ್ರ ಒಪ್ಪಿಗೆ ನೀಡಿದೆ. ಅದರಲ್ಲಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ಕೇಂದ್ರದ ಪ್ರತಿನಿಧಿಗಳೂ ಇರುತ್ತಾರೆ. ನಿರೀಕ್ಷಿತ ಸಮಯಕ್ಕೆ ಕಾಮಗಾರಿ ಮಾಡುತ್ತೇವೆ. ಈ ಯೋಜನೆಯಿಂದ ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಬದಲಾಗಿ, ಜಿಲ್ಲೆಯ ಅಥಣಿ ಬಳಿ ಭೂಮಿ ನೀಡಲಾಗುತ್ತಿದೆ’ ಎಂದರು


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ