Breaking News

ಬೊಮ್ಮಾಯಿಯವರು ಕಣ್ಣು ಬಿಡಲು ಇನ್ನೆಷ್ಟು ಶಿಕ್ಷಕರ ಹೆಣ ಬೀಳಬೇಕು?: ಸಿದ್ದರಾಮಯ್ಯ ಪ್ರಶ್ನೆ

Spread the love

ಬೆಂಗಳೂರು: ಪಿಂಚಣಿಗಾಗಿ ಮುಷ್ಕರದಲ್ಲಿ ತೊಡಗಿದ್ದ ಬಾಗಲಕೋಟೆ ಮೂಲದ ಶಿಕ್ಷಕ ಸಿದ್ದಯ್ಯ ಹಿರೇಮಠ ಮತ್ತು ರಾಯಚೂರು ಜಿಲ್ಲೆ ಸಿಂಧನೂರು ಮೂಲಕ ಶಂಕರಪ್ಪ ಬೋರಡ್ಡಿ ಅವರು ಸರ್ಕಾರ ತಮ್ಮ ಹೋರಾಟಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನು ಸರ್ಕಾರಿ ಕೊಲೆಗಳು ಅನ್ನದೆ ಬೇರೇನು ಹೇಳಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕಳೆದ 141 ದಿನಗಳಿಂದ ಫ್ರೀಡಂ ಪಾರ್ಕ್ ನಲ್ಲಿ ಮುಷ್ಕರ ನಿರತರಾಗಿರುವ ಅನುದಾನಿತ ಶಾಲಾ ಶಿಕ್ಷಕರ ಗೋಳು ಕೇಳುವವರಿಲ್ಲ. ಶಿಕ್ಷಕರು ಕೇಳುತ್ತಿರುವುದು ತಮ್ಮ ಹಕ್ಕಿನ ಪಿಂಚಣಿಯನ್ನು ಎಂಬ ಕನಿಷ್ಠ ಜ್ಞಾನವಾದರೂ ರಾಜ್ಯ ಸರ್ಕಾರಕ್ಕೆ ಬೇಡವೇ? ಬೊಮ್ಮಾಯಿ ಅವರು ಕಣ್ಣು ಬಿಟ್ಟು ನೋಡಲು ಇನ್ನೆಷ್ಟು ಹೆಣ ಬೀಳಬೇಕು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ