Breaking News

ಮರ್ಯಾದೆಗೆ ಅಂಜಿ ಮಗಳ ರುಂಡ-ಮುಂಡ ಬೇರ್ಪಡಿಸಿದ ತಂದೆ!

Spread the love

ಆಂಧ್ರಪ್ರದೇಶ : ತಂದೆಯೊಬ್ಬ, ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳ ರುಂಡ-ಮುಂಡವನ್ನು ಕತ್ತರಿಸಿ ಕೊಲೆ ಮಾಡಿ ಕಾಡಿನಲ್ಲಿ ಎಸೆದಿದ್ದಾನೆ. ಈ ಮರ್ಯಾದಾ ಹತ್ಯೆ ಪ್ರಕರಣ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

 

ಪ್ರಸನ್ನ (21) ಮೃತ ದುರ್ದೈವಿ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಮಗಳನ್ನು ಕೊಂದ ಆರೋಪಿ. ರೆಡ್ಡಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಹಿರಿಯ ಮಗಳಾದ ಪ್ರಸನ್ನಗೆ ಎರಡು ವರ್ಷಗಳ ಹಿಂದೆ ಸಾಫ್ಟ್‌ವೇರ್ ಇಂಜಿನಿಯರ್ ಜೊತೆ ವಿವಾಹವಾಗಿತ್ತು. ಮದುವೆಯ ಬಳಿಕ ಪ್ರಸನ್ನ ಹೈದರಾಬಾದ್‌ನಲ್ಲಿ ವಾಸ ಮಾಡಲು ಆರಂಭಿಸಿದ್ದರು. ಮದುವೆಯಾಗಿ ಎರಡು ವರ್ಷದ ಬಳಿಕ ಹೈದರಾಬಾದಿನಿಂದ ಹಳ್ಳಿಗೆ ಬಂದು ತನ್ನ ಮನೆಯಲ್ಲಿ ವಾಸವಾಗಿದ್ದಳು.

ಈ ವೇಳೆ ಮದುವೆಗೂ ಮುನ್ನ ಪ್ರೇಮ ಸಂಬಂಧ ಹೊಂದಿದ್ದವನ ಜೊತೆ ಸ್ನೇಹ ಸಂಬಂಧ ಬೆಳೆಸಿದ್ದಲ್ಲದೆ, ಹೈದರಾಬಾದ್‌ಗೆ ಹೋಗೋಕು ಮನಸ್ಸು ಮಾಡಿರಲಿಲ್ಲ. ಇದು ತಂದೆಗೆ ಇಷ್ಟವಾಗಿರಲಿಲ್ಲ. ಇದರಿಂದ ತನ್ನ ಪ್ರತಿಷ್ಠೆ ಹಾಳಾಗುತ್ತದೆ ಎಂದು ಕೋಪಗೊಂಡಿದ್ದರು. ಅದೇ ಕಾರಣಕ್ಕೆ ಫೆ. 10ರಂದು ದೇವೇಂದ್ರ ರೆಡ್ಡಿ ಮನೆಯಲ್ಲಿಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ದೇವೇಂದ್ರ ರೆಡ್ಡಿ ಕೆಲವರ ಜತೆ ಸೇರಿ ಕಾರಿನಲ್ಲಿ ಮಗಳ ಶವವನ್ನು ನಂದ್ಯಾಲ-ಗಿದ್ದಲೂರು ಮಾರ್ಗದ ಅರಣ್ಯ ಪ್ರದೇಶಕ್ಕೆ ತಂದು ದೇಹದ ರುಂಡ ಹಾಗೂ ಮುಂಡವನ್ನು ಬೇರೆ ಮಾಡಿದ್ದಾರೆ. ರುಂಡವನ್ನು ಕಾಡಿನ ಒಂದು ಕಡೆ ಎಸೆದಿದ್ದರೆ, ಇನ್ನೊಂದು ಕಡೆ ಉಳಿದ ಭಾಗವನ್ನು ಎಸೆದು ಮನೆಗೆ ಬಂದಿದ್ದರು.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ