Breaking News

ಮೋದಿಯವರ ರೋಡ್ ಶೋ ಗೆ ಐತಿಹಾಸಿಕ ನಗರ ಬೆಳಗಾವಿ ಸಾಕ್ಷಿಯಾಗಲಿದೆ; ಪ್ರಧಾನಿ ನರೇಂದ್ರ ಮೋದಿ ಅವರ ಬೆಳಗಾವಿ

Spread the love

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಮೊಟ್ಟ ಮೊದಲ ಬಾರಿಗೆ ಮೋದಿಯವರ ರೋಡ್ ಶೋ ಗೆ ಐತಿಹಾಸಿಕ ನಗರ ಬೆಳಗಾವಿ ಸಾಕ್ಷಿಯಾಗಲಿದೆ.

ಬೆಳಗ್ಗೆ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ನೆರವೇರಿಸುವ ಮೋದಿ ಅಲ್ಲಿಂದ 2.30ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಎಪಿಎಂಸಿ ಮೈದಾನಕ್ಕೆ ಆಗಮಿಸುವರು. ಅಲ್ಲಿಂದ ಕಾರ್ಯಕ್ರಮ ನಡೆಯಲಿರುವ ಮಾಲಿನಿ ಸಿಟಿವರೆಗೆ 10 ಕಿಮೀ ರೋಡ್ ಶೋ ನಡೆಯಲಿದೆ.

ಎಂಪಿಎಂಸಿ ಮೈದಾನದಿಂದ ಪ್ರಧಾನಿ ನರೇಂದ್ರ ಮೋದಿಯವರ ರೋಡ್ ಶೋ ಆರಂಭವಾಗಲಿದೆ. ಅಲ್ಲಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತ…. ಕಾಲೇಜು ರಸ್ತೆ…. ಬೋಗಾರ್ವೇಸ್…. ರಾಮಲಿಂಗ್ ಖಿಂಡ್ ಗಲ್ಲಿ ….. ಶನಿಮಂದಿರ…. ಕಪಿಲೇಶ್ವರ ರೈಲ್ವೆ ಓವರ್ ಬ್ರಿಜ್…. ಛತ್ರಪತಿ ಶಿವಾಜಿ ಉದ್ಯಾನ…. ಯೂನಿಯನ್ ಬ್ಯಾಂಕ್ ಸರ್ಕಲ್… ಹೊಸ ಡಬಲ್ ರಸ್ತೆ… ಬಿ.ಎಸ್.ಯಡಿಯೂರಪ್ಪ ಮಾರ್ಗ… ಮಾಲಿನಿ ಸಿಟಿ.

 

ಮಾರ್ಗದುದ್ದಕ್ಕೂ ರಸ್ತೆಗಳನ್ನು ಅಲಂಕರಿಸಲಾಗಿದೆ. ಭಾರತೀಯ ಜನತಾ ಪಾರ್ಟಿಯ ಧ್ವಜಗಳನ್ನು ಹಾಕಲಾಗಿದೆ. 

ಮಾಲಿನಿ ಸಿಟಿ ಮೈದಾನದಲ್ಲಿ ಬೃಹತ್ ಸಭಾ ಕಾರ್ಯಕ್ರಮ ನಡೆಯಲಿದೆ. ಅಲ್ಲಿ ಕಿಸಾನ್ ಸಮೃದ್ಧಿ ಯೋಜನೆಯ ಅಡಿಯಲ್ಲಿ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡುವ ಪ್ರಧಾನಿ, ಬೆಳಗಾವಿ – ಧಾರವಾಡ ನೇರ ರೈಲು ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸುವರು.

ಬೆಳಗಾವಿಯ ನೂತನ ರೈಲ್ವೆ ನಿಲ್ದಾಣವನ್ನು ಸಾಂಕೇತಿಕವಾಗಿ ಉದ್ಘಾಟಿಸಲಿದ್ದಾರೆ. ಜಿಲ್ಲೆಯ 5 ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಒಟ್ಟಾರೆ ಸುಮಾರು 2,200 ಕೋಟಿ ರೂ. ಮೊತ್ತದ ಕಾಮಗಾರಿಗಳಿಗೆ ಪ್ರಧಾನಿ ಚಾಲನೆ ನೀಡುವರು.


Spread the love

About Laxminews 24x7

Check Also

ಅಂತರರಾಜ್ಯ ಕಳ್ಳರನ್ನು ಬಂಧಿಸಿ 6.11 ಲಕ್ಷ ರೂ. ಮೌಲ್ಯದ ವಸ್ತುಗಳ ಜಪ್ತಿ

Spread the loveಬೆಳಗಾವಿ: ಹಾರೂಗೇರಿ ಠಾಣೆ ವ್ಯಾಪ್ತಿಯಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದ ತನಿಖೆಯಲ್ಲಿ ಮಹಾರಾಷ್ಟ್ರ ಮೂಲಕ 7 ಅಂತರರಾಜ್ಯ ಕಳ್ಳರನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ