Breaking News
Home / ರಾಜಕೀಯ / 2023 | ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ಸಜ್ಜು

2023 | ವಿಜಯ ಸಂಕಲ್ಪ ಯಾತ್ರೆಗೆ ಬಿಜೆಪಿ ಸಜ್ಜು

Spread the love

ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಪರ ಅಲೆ ಎಬ್ಬಿಸಲು ಬಿಜೆಪಿಯು ಮಾರ್ಚ್‌ 1 ರಿಂದ ‘ವಿಜಯ ಸಂಕಲ್ಪ ಯಾತ್ರೆ’ ಆರಂಭಿಸಲಿದೆ.

ಮಾ.1 ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮಾ.

2 ರಂದು ಬೆಳಗಾವಿ ಜಿಲ್ಲೆಯ ನಂದಗಢದಲ್ಲಿರುವ ಸಂಗೊಳ್ಳಿ ರಾಯಣ್ಣ ಸ್ಮಾರಕದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಮಾ.3 ರಂದು ಬೀದರ್‌ ಜಿಲ್ಲೆ ಬಸವಕಲ್ಯಾಣ ಅನುಭಮಂಪಟದ ಸ್ಥಳದಿಂದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಚಾಲನೆ ನೀಡಲಿದ್ದಾರೆ. ಈವರೆಗೆ ಮಂದಗತಿಯಲ್ಲಿ ನಡೆಸುತ್ತಿದ್ದ ಪ್ರಚಾರಕ್ಕೆ ಹೆಚ್ಚಿನ ಬಿರುಸು ನೀಡಲು ಬಿಜೆಪಿ ಮುಂದಾಗಿದೆ.

‘ಈ ಯಾತ್ರೆಯ ಮೂಲಕ ಸುಮಾರು 4 ಕೋಟಿ ಜನರನ್ನು ತಲುಪುವ ಉದ್ದೇಶ ಹೊಂದಲಾಗಿದೆ. ಬಹುಮತದಿಂದ ಅಧಿಕಾರಕ್ಕೆ ಬರಲು ಇದು ಪೂರಕವಾಗಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿ ಹಲವು ಮುಖಂಡರು 4 ಯಾತ್ರೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌
ತಿಳಿಸಿದ್ದಾರೆ.

ರಾಜ್ಯ ಮತ್ತು ರಾಷ್ಟ್ರ ಮಟ್ಟದ 50 ಕ್ಕೂ ಹೆಚ್ಚು ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಮಾ. 25 ರಂದು ದಾವಣಗೆರೆಯಲ್ಲಿ ಬೃಹತ್ ರ್‍ಯಾಲಿ ನಡೆಯಲಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಭರ್ಜರಿ ಗೆಲುವು ಸಾಧಿಸುವ ಉದ್ದೇಶಕ್ಕೆ ಜನತಾ ಅಲೆ ಎಬ್ಬಿಸಲು ಈ ಯಾತ್ರೆ ನಡೆಯಲಿದೆ ಎಂದರು.


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ