Breaking News

ಬೆಳಗಾವಿ: ಮಾರ್ಚ್‌ 1ರಂದು ಸಿದ್ದರಾಮಯ್ಯ ‘ಪ್ರಜಾಧ್ವನಿ’ ಯಾತ್ರೆ

Spread the love

ಬೆಳಗಾವಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ‘ಪ್ರಜಾಧ್ವನಿ’ ಯಾತ್ರೆಯ ಅಂಗವಾಗಿ ಮಾರ್ಚ್‌ 1ರಂದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪಂತಬಾಳೆಕುದ್ರಿಯಲ್ಲಿ ಸಮಾವೇಶ ನಡೆಯಲಿದೆ.

 

ಬೆಳಿಗ್ಗೆ 10 ಗಂಟೆಗೆ ಶಿಂಧೋಳಿಯಿಂದ ಮೆರವಣಿಗೆ ನಡೆಯಲಿದೆ. 5 ಸಾವಿರ ಬೈಕುಗಳ ಸಮೇತ ಯುವಜನರು ಮೆರವಣಿಗೆಯಲ್ಲಿ ಪಾಲ್ಗೊಳ್ಳುವರು. ಅಲ್ಲಿಂದ ಪಂತಬಾಳೆಕುಂದ್ರಿಯ ವೈರ್‌ಲೆಸ್ ಮೈದಾನಕ್ಕೆ ತೆರಳಿ ಅಲ್ಲಿ ಸಮಾವೇಶ ನಡೆಸಲಾಗುವುದು.

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ, ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವರಾದ ವಿನಯ ಕುಲಕರ್ಣಿ, ಜಮೀರ್ ಅಹ್ಮದ್ ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಳ್ಳಲಿದ್ದಾರೆ.

ಮೈದಾನದಲ್ಲಿ 25 ಸಾವಿರ ಖುರ್ಚಿಗಳನ್ನು ಹಾಕಲಾಗಿದ್ದು, ಸಮಾವೇಶದಲ್ಲಿ 30 ಸಾವಿರಕ್ಕಿಂತ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ 


Spread the love

About Laxminews 24x7

Check Also

ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ!

Spread the love ಅತಿವೃಷ್ಟಿ-ಬರ ವೀಕ್ಷಣೆಗೆ ಸಚಿವರಿಗೆ ಫೀಲ್ಡ್ ಟಾಸ್ಕ್: ಬೆಳಗಾವಿ ಹೊಣೆ ವಹಿಸಿಕೊಂಡ ಸತೀಶ್ ಜಾರಕಿಹೊಳಿ! ರಾಜ್ಯದಲ್ಲಿ ಉಂಟಾಗಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ