Breaking News

ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ, ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರು

Spread the love

ಕಾಗವಾಡ: ಕಾಂಗ್ರೆಸ್‌ನ ಕಾಗವಾಡ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಪ್ರಶಾಂತ ಅಪರಾಜ ಅವರಿಗೆ ಐನಾಪುರ ಪಟ್ಟಣದಲ್ಲಿ ಸೋಮವಾರ ಸಂಜೆ ಅಪರಿಚಿತರು ಚಾಕು ಇರಿದು ಪರಾರಿಯಾಗಿದ್ದಾರೆ. ಅದೃಷ್ಟವಶಾತ್‌ ಪ್ರಶಾಂತ್‌ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

ಐನಾಪುರ ಹೊರವಲಯದ ಬೈಕ್‌ ಮೇಲೆ ಹೊರಟಾಗ ಅಡ್ಡಗಟ್ಟಿದ ಇಬ್ಬರು ಅಪರಿಚಿತ ಯುವಕರು, ಪ್ರಶಾಂತ ಅವರ ಕೈ- ಹೊಟ್ಟೆಗೆ ಚಾಕು ಇರಿದು ಪರಾರಿಯಾದರು. ಘಟನೆ ಕಾರಣ ಗೊತ್ತಾಗಿಲ್ಲ. ಅಲ್ಲದೇ ಪ್ರಶಾಂತ ಅವರು ಚಾಕು ಇರಿದವರನ್ನು ಗುರುತಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಶಾಂತ ಅವರು ಐನಾಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಗವಾಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ