Breaking News

ಬೆಳಗಾವಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಗೆ​ ಚಾಲನೆ ನೀಡಲಿರುವ ರಾಜನಾಥ್ ಸಿಂಗ್

Spread the love

ರಾಜನಾಥ್ ಸಿಂಗ್ ಇಂದು ಬೆಳಗಾವಿ ಜಿಲ್ಲೆ ಎರಡು ಮತಕ್ಷೇತ್ರದಲ್ಲಿ ಪ್ರಚಾರ ಮಾಡಿ ದೆಹಲಿಗೆ ವಾಪಸ್ ಆಗಲಿದ್ದಾರೆ. ನಂತರ ರಾಜ್ಯ ನಾಯಕರಿಂದ ಪ್ರತಿ ದಿನ ಬೆಳಗ್ಗೆ, ಮಧ್ಯಾಹ್ನ ಎರಡು ಮತಕ್ಷೇತ್ರದಲ್ಲಿ ರೋಡ್ ಶೋ, ಸಂಜೆ ಮೂರನೇ ಮತಕ್ಷೇತ್ರದಲ್ಲಿ ವಿಜಯ ಸಂಕಲ್ಪ ಸಮಾವೇಶ ನಡೆಯಲಿದೆ.

ಹೀಗೆ ಕಿತ್ತೂರು ಕರ್ನಾಟಕದ 58 ವಿಧಾನಸಭಾ ಮತಕ್ಷೇತ್ರದಲ್ಲಿ ವಿಜಯ ಸಂಕಲ್ಪ ಯಾತ್ರೆ. ಸಂಚರಿಸಲಿದೆ.

ಬಸವೇಶ್ವರರ ಕರ್ಮ ಭೂಮಿ ಬಸವಕಲ್ಯಾಣಕ್ಕೆ ನಾಳೆ(ಮಾ.03) ಕೇಂದ್ರ ಗೃಹ ಸಚಿವ ಅಮೀತ್ ಶಾ ಆಮಿಸಲಿದ್ದು, ಬಿಜೆಪಿಯ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ನಾಳೆ ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೀದರ್ ‌ಏರ್ ಬೇಸ್ ಗೆ ಮುಂಜಾನೆ 11:40ಕ್ಕೆ ಆಗಮಿಸಿ, ಬಸವಕಲ್ಯಾಣದ ಹೆಲಿಪ್ಯಾಡ್​ನಿಂದ ರಸ್ತೆಯ ಮೂಲಕ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ಕೊಡಲಿದ್ದಾರೆ. ನಂತರ ಅನುಭವ ಮಂಟಪದಿಂದ ಬಸವಕಲ್ಯಾಣ ತೇರು ಮೈದಾನದ ವರೆಗೆ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಇತರೆ ನಾಐಕರು ಅಮಿತ್ ಶಾ ಗೆ ಸಾಥ್ ನೀಡಲಿದ್ದಾರೆ.

ಇನ್ನು ಅಮಿತ್ ಶಾ ಅವರನ್ನು ಭರ್ಜರಿಯಾಗಿ ಸ್ವಾಗತಿಸಲು ತೀರ್ಮಾನಿಸಿದ್ದು, ಅವರಿಗಾಗಿಯೇ ಬೆಳ್ಳಿ ಕಿರಿಟ ಹಾಗೂ ಬೆಳ್ಳಿ ಗದೆ ರೆಡಿಯಾಗಿದೆ. ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು ಶಾಗೆ ಬೆಳ್ಳಿ ಗದೆ ಮತ್ತು ಬೆಳ್ಳಿ ಕಿರಿಟ್ ತೊಡಿಸಿ ಸನ್ಮಾನಿಸಲಿದ್ದಾರೆ.


Spread the love

About Laxminews 24x7

Check Also

ಸರ್ಕಾರಕ್ಕೆ 4,416 ಕೋಟಿ ರೂ. ಅಬಕಾರಿ ರಾಜಸ್ವ ಸಂಗ್ರಹ: ಕಳ್ಳಭಟ್ಟಿ ಮುಕ್ತ ಕಲಬುರಗಿ ಜಿಲ್ಲೆಗೆ ಪಣ, ಗಡಿಯಲ್ಲಿ ಕಟ್ಟೆಚ್ಚರ

Spread the loveಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಕಳ್ಳಭಟ್ಟಿ ಮತ್ತು ಕಲಬೆರೆಕೆ ಸೇಂದಿ ಹಾಗೂ ಮಾದಕ ವಸ್ತುಗಳ (ಗಾಂಜಾ ಮತ್ತು ಇತರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ