ಹಾವೇರಿ: ‘ಸುಕ್ಷೇತ್ರ ಶಿಶುನಾಳ ಗ್ರಾಮದಲ್ಲಿ ಸಂತ ಶಿಶುನಾಳ ಶರೀಫರ ತತ್ವ ಪದಗಳ ಭಾವಾರ್ಥ ಅರಿಯುವ ಥೀಮ್ ಪಾರ್ಕ್ ನಿರ್ಮಾಣ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಶಿಶುವಿನಾಳ ಗ್ರಾಮದ ಸಂತ ಶರೀಫ ಶಿವಯೋಗಿ ಮತ್ತು ಗೋವಿಂದಭಟ್ಟರ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗುರುವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.
‘ಶಿಶುವಿನಾಳದ ಸಮಗ್ರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಈಗ ₹ 8 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ’ ಎಂದರು.
Laxmi News 24×7