Breaking News

40 ಲಕ್ಷ ಲಂಚ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಬಂಧನ

Spread the love

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ ನಿಯಮಿತಕ್ಕೆ(ಕೆಎಸ್ ಡಿಎಲ್) ರಾಸಾಯನಿಕ ಪೂರೈಸುವ ಟೆಂಡರ್ ಪ್ರಕ್ರಿಯೆಯಲ್ಲಿ ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಲು ₹ 40 ಲಕ್ಷ‌ ಲಂಚ ಪಡೆದ ಕಾರ್ಖಾನೆಯ ಅಧ್ಯಕ್ಷರೂ ಆಗಿರುವ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮಗ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ಪೊಲೀಸರು ಗುರುವಾರ ಸಂಜೆ ಬಂಧಿಸಿದ್ದಾರೆ.

 

ಪ್ರಶಾಂತ್ ಮಾಡಾಳ್ ಬೆಂಗಳೂರು ಜಲಮಂಡಳಿ ಮುಖ್ಯ ಲೆಕ್ಕಾಧಿಕಾರಿ. ತಂದೆಯ ಪರವಾಗಿ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರು ಬಂಧಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ಪ್ರಶಾಂತ್, ನಿಯೋಜನೆ ಮೇಲೆ ಬೆಂಗಳೂರು ಜಲಮಂಡಳಿಯಲ್ಲಿ ಮುಖ್ಯ ಲೆಕ್ಕಾಧಿಕಾರಿ ಹುದ್ದೆಯಲ್ಲಿದ್ದಾರೆ. ಅವರು ಹೊಂದಿರುವ ಖಾಸಗಿ ಕಚೇರಿಯೊಂದರಲ್ಲಿ‌ ಸಂಜೆ 6.45ಕ್ಕೆ ಲಂಚದ ಹಣ ಪಡೆಯುವಾಗ ಬಂಧಿಸಲಾಗಿದೆ‌.

ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಕೆಗೆ ಆಯ್ಕೆಯಾಗಿರುವ ಗುತ್ತಿಗೆದಾರರಿಂದ ಮಾಡಾಳ್ ವಿರೂಪಾಕ್ಷಪ್ಪ ₹81 ಲಕ್ಷ‌ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಹಣವನ್ನು ಮಗನಿಗೆ ತಲುಪಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದ್ದರು ಎಂದು ಲೋಕಾಯುಕ್ತದ ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಹಾಸನಾಂಬೆಯ ದಾಖಲೆಯ ದರ್ಶನ: ಒಂದೇ ದಿನ 3.10 ಲಕ್ಷ ಭಕ್ತರ ಆಗಮನ

Spread the loveಹಾಸನ: ಈ ವರ್ಷ ಹಾಸನಾಂಬೆ ದೇವಾಲಯಕ್ಕೆ ಒಂದು ವಾರದಲ್ಲಿ 13.89 ಲಕ್ಷ ಭಕ್ತರು ಹರಿದುಬಂದಿದ್ದು, ಶುಕ್ರವಾರ ಒಂದೇ ದಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ