ಬೆಂಗಳೂರು : ಮಾರ್ಚ್ 9 ರಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಪರೀಕ್ಷೆಗೆ ಹಿಜಾಬ್ ಸೇರಿದಂತೆ ಯಾವುದೇ ಧರ್ಮಧಾರಿತ ಉಡುಪು ಧರಿಸಿ ಬಂದರೆ ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಬಿ.ಸಿ.ನಾಗೇಶ್, ಹಿಜಾಬ್ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದ್ದು, ಈ ವಿಚಾರದಲ್ಲಿ ಕಳೆದ ಸಾಲಿನ ಪರೀಕ್ಷೆ ವೇಳೆ ಯಾವ ನಿಯಮ ಅನುಸರಿಸಲಾಗಿತ್ತೋ ಅದೇ ಮುಂದುವರೆಯಲಿದೆ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಬರಬಹುದು. ಅಥವಾ ಇನ್ನಿತರ ಸಾಮಾನ್ಯ ಉಡುಪು ಧರಿಸಿ ಬರಬಹುದು. ಹಿಜಾಬ್ ಹಾಗೂ ಇನ್ನಿತರ ಯಾವುದೇ ಧರ್ಮಧಾರಿತ ಉಡುಪುಗಳು ಸಮವಸ್ತ್ರಕ್ಕೆ ಸಂಬಂಧಿಸಿದವಲ್ಲ. ಹೀಗಾಗಿ ಅವುಗಳನ್ನು ಧರಿಸಿ ಬಂದರೆ ಪ್ರವೇಶ ನೀಡಲಾಗುವುದಿಲ್ಲ ಎಂದರು.
ಇನ್ನು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ನಿಗದಿತ ಸಮಯಕ್ಕಿಂತ 30 ನಿಮಿಷಗಳ ಮೊದಲು ಪರೀಕ್ಷಾ ಕೊಠಡಿ ಪ್ರವೇಶಿಸಲು ಅವಕಾಶ ನೀಡಲಾಗುವುದು. ಬಹುತೇಕ ಎಲ್ಲ ವಿದ್ಯಾರ್ಥಿಗಳು ಈ ಎರಡೂ ಪರೀಕ್ಷೆಗಳನ್ನು ಬೇರೆ ಶಾಲೆ, ಕಾಲೇಜುಗಳಲ್ಲಿ ಬರೆಯುವುದರಿಂದ ಅವರು ಅಲ್ಲಿನ ಪರಿಸರದೊಂದಿಗೆ ಮುಕ್ತವಾಗಿ ಹೊಂದಿಕೊಂಡು ಒತ್ತಡವಿಲ್ಲದೆ ಪರೀಕ್ಷೆ ಬರೆಯಲು ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ
- ದಿನಾಂಕ 09-03-2023, ಗುರುವಾರ – ಕನ್ನಡ, ಅರೇಬಿಕ್
- ದಿನಾಂಕ 11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
- ದಿನಾಂಕ 13-03-2023, ಸೋಮವಾರ – ಅರ್ಥಶಾಸ್ತ್ರ
- ದಿನಾಂಕ 14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
- ದಿನಾಂಕ 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
- ದಿನಾಂಕ 16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
- ದಿನಾಂಕ 17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
- ದಿನಾಂಕ 18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
- ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ
- ದಿನಾಂಕ 21-03-2023, ಮಂಗಳವಾರ – ಹಿಂದಿ
- ದಿನಾಂಕ 23-03-2023, ಗುರುವಾರ – ಇಂಗ್ಲೀಷ್
- ದಿನಾಂಕ 25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
- ದಿನಾಂಕ 27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
- ದಿನಾಂಕ 29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ