Breaking News

ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರಾ ಮತ್ತೊಬ್ಬ ಸಚಿವ ?

Spread the love

ರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಹಲವಾರು ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಸಚಿವ ನಾರಾಯಣಗೌಡ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಇದಕ್ಕೆ ಪುಷ್ಟಿ ನೀಡುವಂತೆ ಕೆ ಆರ್ ಪೇಟೆಯಲ್ಲಿ ಮಾತನಾಡಿದ್ದ ಸಚಿವ ನಾರಾಯಣಗೌಡ, ತಮಗೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿರುವುದು ನಿಜ. ಕ್ಷೇತ್ರದ ಜನತೆ ಹಾಗೂ ಅಭಿಮಾನಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇನೆ ಎನ್ನುವ ಮೂಲಕ ಕುತೂಹಲ ಮೂಡಿಸಿದ್ದರು.

ಇದೀಗ ಮತ್ತೊಬ್ಬ ಸಚಿವರು ಕಾಂಗ್ರೆಸ್ ಸೇರ್ಪಡೆಗೊಳ್ಳಲು ಸಿದ್ದರಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೌದು, ವಸತಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದ್ದು, ಮುಂದಿನ ವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜೊತೆ ಈ ನಿಟ್ಟಿನಲ್ಲಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

ಈಗಾಗಲೇ ಪೂರ್ವಭಾವಿ ಮಾತುಕತೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆಯಾದರೂ ಸಚಿವ ಸೋಮಣ್ಣ ಅವರ ಆಪ್ತರು ಮಾತ್ರ ಇದೆಲ್ಲ ವದಂತಿ ಎಂದು ತಳ್ಳಿ ಹಾಕಿದ್ದಾರೆ. ಆದರೆ ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳು ಸಂಭವಿಸಬಹುದು ಎಂದು ಹಲವರು ಲೆಕ್ಕಾಚಾರ ಹಾಕುತ್ತಿದ್ದಾರೆ.


Spread the love

About Laxminews 24x7

Check Also

ರಾಜ್ಯದಲ್ಲಿ ವಿವಿಧ ಬೆಳೆಗಳ ಬಿತ್ತನೆ ನಡೆಯುತ್ತಿದ್ದು, ರಾಸಾಯನಿಕ ಗೊಬ್ಬರದ ಬೇಡಿಕೆ ಹೆಚ್ಚಿದೆ. ಈ ಬಗ್ಗೆ ಕೃಷಿ ಸಚಿವ ಚಲುವರಾಯಸ್ವಾಮಿ ಸ್ಪಷ್ಟನೆ

Spread the loveಮೈಸೂರು: ಪ್ರಸಕ್ತ ಸಾಲಿಗೆ ರಾಸಾಯನಿಕ ಗೊಬ್ಬರದ ಕೊರತೆಯಿಲ್ಲ. ಆದರೆ, ಕೇಂದ್ರ ಸರ್ಕಾರ ಮುಂದಿನ ವರ್ಷದಿಂದ ಯೂರಿಯಾ ಪೂರೈಕೆಯನ್ನು ಶೇ.50ರಷ್ಟು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ