Breaking News

ಕರ್ನಾಟಕ ಚುನಾವಣೆಗೆ ಮುಹೂರ್ತ ಫಿಕ್ಸ್​..! ಯಾವಾಗ ಚುನಾವಣೆ..?

Spread the love

ರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಮೂರು ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ನಡೆಸುತ್ತಿವೆ. ಜೆಡಿಎಸ್​ ಎಲ್ಲರಿಗಿಂತಲೂ ಮುಂದೆ ಎನ್ನುವಂತೆ ತಿಂಗಳ ಹಿಂದೆಯೇ ಚುನಾವಣಾ ಅಭ್ಯರ್ಥಿಗಳನ್ನು ಘೋಷಣೆ ಮಾಡಿ ಪ್ರಚಾರ ನಡೆಸುತ್ತಿದೆ.

ಕಾಂಗ್ರೆಸ್​, ಬಿಜೆಪಿ ಕೂಡ ಪ್ರಚಾರದಲ್ಲಿ ಹಿಂದೆ ಬಿದ್ದಿಲ್ಲ.

ಈಗಾಗಲೇ ಒಂದೊಂದು ರೌಂಡ್​ ಪ್ರಚಾರ ಮುಗಿಸಿದ್ದು, ಶೀಘ್ರದಲ್ಲೇ ಟಿಕೆಟ್​ ಘೋಷಣೆ ಮಾಡುವ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ರಾಜ್ಯ ವಿಧಾನಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್​ ಆಗಲು ಮುಹೂರ್ತ ಕೂಡಿ ಬಂದಿದೆ.

 ಈಗಾಗಲೇ ರಾಜ್ಯ ಸರ್ಕಾರಕ್ಕೆ ಚುನಾವಣೆಗೆ ತಯಾರಿ ಮಾಡಿಕೊಳ್ಳುವಂತೆ ಸೂಚನೆ ಕೊಟ್ಟಿದ್ದ ಕೇಂದ್ರ ಚುನಾವಣಾ ಆಯೋಗ ಇದೇ ಮಾರ್ಚ್​ 27ರಂದು ಕರ್ನಾಟಕದಲ್ಲಿ ನಡೆಯುವ ಚುನಾವಣೆ ಹಾಗು ಫಲಿತಾಂಶದ ದಿನಾಂಕಗಳನ್ನು ಪ್ರಕಟ ಮಾಡಲಿದೆ ಎನ್ನುವ ಮಾಹಿತಿ ನಿಮ್ಮ “ಪ್ರತಿಧ್ವನಿ”ಗೆ ಲಭ್ಯವಾಗಿದೆ.

ಮೂಲಗಳ ಪ್ರಕಾರ ಏಪ್ರಿ;ಲ್​ ಕೊನೆಯ ವಾರ ಹಾಗು ಮೇ ಮೊದಲ ವಾರ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎನ್ನಲಾಗಿದೆ. ಮಾರ್ಚ್​ 27ರಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿ ಆಗಲಿದ್ದು, ಏಪ್ರಿಲ್​ ತಿಂಗಳಲ್ಲಿ ನಾಮಪತ್ರ ಸಲ್ಲಿಕೆ, ಪರಿಶೀಲನೆ, ಅಬ್ಬರದ ಪ್ರಚಾರ ನಡೆಯಲಿದೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ