ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಪುತ್ರನ ಮನೆ ಮೇಲಿನ ಲೋಕಾಯುಕ್ತ ದಾಳಿ ಪ್ರಕರಣವನ್ನು ಕಾಂಗ್ರೆಸ್ ಖಂಡಿಸಿದೆ. ಮಾಡಾಳ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಆಗ್ರಹಿಸಿದೆ.
ಇದೀಗ ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಲೋಕಾಯುಕ್ತ ವರದಿ ಬಂದ ಬಳಿಕ ವಿರೂಪಾಕ್ಷಪ್ಪ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಇನ್ನೂ, ಮಂಡ್ಯ ಸಂಸದೆ ಸುಮಲತಾ ( Sumalatha) ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಯಲ್ಲಿದೆ.ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಸುಮಲತಾ ಅಂಬರೀಷ್ ಬಿಜೆಪಿ ಪರವೇ ಇದ್ದಾರೆ. ಮಂಡ್ಯದ ಮದ್ದೂರಿನಲ್ಲಿ ಮಾರ್ಚ್ 12 ರಂದು ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಸಭೆಯ ಕುರಿತು ಪರಿಶೀಲನೆಗಾಗಿ ನಾನು ಮಂಡ್ಯಕ್ಕೆ ಭೇಟಿ ನೀಡಿದ್ದೇ ಎಂದರು.
ಇನ್ನೂ,ಈ ಬಗ್ಗೆ ಮಂಡ್ಯದಲ್ಲಿ ನಿನ್ನೆ ನಡೆದ ಬೆಂಬಲಿಗರ ಜೊತೆಗಿನ ಸಭೆ ಬಳಿಕ ಸುಮಲತಾ ಪ್ರತಿಕ್ರಿಯೆ ನೀಡಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸುತ್ತೇನೆ, ಒಂದು ವಾರದೊಳಗೆ ನಿರ್ಧಾರ ಪ್ರಕಟಿಸುತ್ತೇನೆ , ಪಕ್ಷ ಸೇರ್ಪಡೆ ಬಗ್ಗೆ ಮಂಡ್ಯದಲ್ಲೇ ಘೋಷಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಯಲ್ಲಿದೆ.