Breaking News

ಸುಮಲತಾ ಬಿಜೆಪಿ ಪರವಾಗಿಯೇ ಇದ್ದಾರೆ’ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the love

ಬೆಂಗಳೂರು : ಮಂಡ್ಯ ಸಂಸದೆ ಸುಮಲತಾ ( Sumalatha) ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಯಲ್ಲಿದೆ.

ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಸುಮಲತಾ ಅಂಬರೀಷ್ ಬಿಜೆಪಿ ಪರವೇ ಇದ್ದಾರೆ.

ಮಂಡ್ಯದ ಮದ್ದೂರಿನಲ್ಲಿ ಮಾರ್ಚ್ 12 ರಂದು ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಸಭೆಯ ಕುರಿತು ಪರಿಶೀಲನೆಗಾಗಿ ನಾನು ಮಂಡ್ಯಕ್ಕೆ ಭೇಟಿ ನೀಡಿದ್ದೇ ಎಂದರು.

ಇನ್ನೂ,ಈ ಬಗ್ಗೆ ಮಂಡ್ಯದಲ್ಲಿ ನಿನ್ನೆ ನಡೆದ ಬೆಂಬಲಿಗರ ಜೊತೆಗಿನ ಸಭೆ ಬಳಿಕ ಸುಮಲತಾ ಪ್ರತಿಕ್ರಿಯೆ ನೀಡಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸುತ್ತೇನೆ, ಒಂದು ವಾರದೊಳಗೆ ನಿರ್ಧಾರ ಪ್ರಕಟಿಸುತ್ತೇನೆ , ಪಕ್ಷ ಸೇರ್ಪಡೆ ಬಗ್ಗೆ ಮಂಡ್ಯದಲ್ಲೇ ಘೋಷಿಸುತ್ತೇನೆ ಎಂದು ಸುಮಲತಾ ಹೇಳಿದ್ದಾರೆ. ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವಿಚಾರ ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಯಲ್ಲಿದೆ.


Spread the love

About Laxminews 24x7

Check Also

ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್‌ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ