Breaking News

ಮಾಡಾಳ್ ವಿರುದ್ಧ ಕ್ರಮಕ್ಕೆ ವರದಿ ಸಲ್ಲಿಕೆ: B,S.Y

Spread the love

ಲಬುರಗಿ: ‘ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(ಕೆಎಸ್‌ಡಿಎಲ್‌) ಅಧ್ಯಕ್ಷರೂ ಆಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರ ವಿರುದ್ಧ ಕ್ರಮಕ್ಕೆ ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿಗೆ ವರದಿ ಸಲ್ಲಿಸಲಾಗಿದೆ’ ಎಂದು ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.

ಯಡಿಯೂರಪ್ಪ ಹೇಳಿದರು.

ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಕ್ಷಮಿಸಲಾರದಂತಹ ಅಕ್ರಮ ಎಸಗಿ ತಪ್ಪು ಮಾಡಿದ್ದಾರೆ. ಹೀಗಾಗಿ ಅವರ ಬಂಧನ ಆಗಲೇಬೇಕು. ಅವರ ವಿರುದ್ಧ ಕ್ರಮತೆಗೆದುಕೊಳ್ಳುತ್ತೇವೆ’ ಎಂದು ಭರವಸೆ ನೀಡಿದರು.

ಕೆಎಸ್‌ಡಿಎಲ್‌ಗೆ ರಾಸಾಯನಿಕ ಪೂರೈಸುವ ಗುತ್ತಿಗೆಯ ಕಾರ್ಯಾದೇಶ ನೀಡಲು ₹ 40 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ, ಪ್ರಶಾಂತ್‌ ಮಾಡಾಳ್‌ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಪ್ರಶಾಂತ್ ಅವರು ಮಾಡಾಳ್‌ ವಿರೂಪಾಕ್ಷಪ್ಪ ಅವರ ಮಗ. ವಿರೂಪಾಕ್ಷಪ್ಪ ಕೂಡ ಆರೋಪಿ ಎಂದು ಈ ಪ್ರಕರಣದ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದ್ದು, ಪ್ರಕರಣದ ಬಳಿಕ ಮಾಡಾಳ್ ಅವರು ನಾಪತ್ತೆ ಆಗಿದ್ದಾರೆ.


Spread the love

About Laxminews 24x7

Check Also

ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ಸರ್ಕಾರಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ: ಯತ್ನಾಳ

Spread the love ದಾವಣಗೆರೆ: ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ