Breaking News

ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಕಚೇರಿ ಉದ್ಘಾಟಿಸಿದ: ಸತೀಶ ಜಾರಕಿಹೊಳಿ

Spread the love

ಬೆಳಗಾವಿ: ‘ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಹೆಚ್ಚಿದ್ದಾರೆ. ಆದರೆ, ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರ ಗೆಲುವಿಗೆ ಎಲ್ಲರೂ ಶ್ರಮಿಸಬೇಕು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

 

ವಡಗಾವಿಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರಚಾರ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಮೊದಲು ದಕ್ಷಿಣ ಕ್ಷೇತ್ರದಲ್ಲಿ ನಮ್ಮ ಪಕ್ಷದ ಸಂಘಟನೆ ಕಡಿಮೆ ಇದೆ ಎಂಬ ಭಾವನೆ ಇತ್ತು. ಆದರೆ, ಈಗ ಇಲ್ಲಿಯೂ ಪಕ್ಷದ ಸಂಘಟನೆ ಪ್ರಬಲವಾಗಿದೆ. ಹಾಗಾಗಿ, ಚುನಾವಣೆಯಲ್ಲಿ ಕಾಂಗ್ರೆಸ್ ಬಾವುಟ ಹಾರಿಸುತ್ತೇವೆ ಎಂಬ ಶಕ್ತಿ ಬಂದಿದೆ’ ಎಂದರು.

‘ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ನಿಯಂತ್ರಣ ಹೇರಲು, ಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಸಿ. ದಕ್ಷಿಣ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನೇಕಾರರು ಇದ್ದಾರೆ. ಬೆಲೆ ಏರಿಕೆಯಿಂದಾಗಿ ನೇಕಾರರು ಕೂಡ ಸಂಕಷ್ಟದಲ್ಲಿದ್ದಾರೆ. ನಮ್ಮ ತೆರಿಗೆ ಹಣ ನಮಗೆ ಸಿಗುವಂತೆ ಮಾಡಬೇಕಿದೆ. ಅದಕ್ಕೆ ಕಾಂಗ್ರೆಸ್‌ ಗೆಲ್ಲಿಸಿ’ ಎಂದರು.

ಕಾಂಗ್ರೆಸ್ ನಗರ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಸೇಠ್, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ರಮೇಶ ಸೊಂಟಕ್ಕಿ, ಪ್ರದೀಪ ಎಂ.ಜೆ. ರಮೇಶ ಗೋರಲ್ ಮೊದಲಾದವರು ಇದ್ದರು.


Spread the love

About Laxminews 24x7

Check Also

ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ ಮಾಲಿನಿ ಸಿಟಿ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಎಸ್.ಎನ್.ದೇಸಾಯಿ ಹೇಳಿದರು.

Spread the loveಬೆಳಗಾವಿ :ಪ್ರಸಕ್ತ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕ, ಬಾಲಕಿಯರ ರಾಜ್ಯಮಟ್ಟದ ಸ್ಕೇಟಿಂಗ್ ಸ್ಪರ್ಧೆಯನ್ನು ನ.26 ರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ