Breaking News

ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆ ಇಂದು, ನಾಳೆ ಕಾಂಗ್ರೆಸ್‌ ಸಭೆ

Spread the love

ಬೆಂಗಳೂರು: ಸುಮಾರು 70ರಿಂದ 80 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಆಯ್ಕೆಗೆ 2ನೇ ಹಂತದ ಕಸರತ್ತು ಮಂಗಳವಾರ ಹಾಗೂ ಬುಧವಾರ ಎರಡು ದಿನಗಳ ಕಾಲ ನಡೆಯಲಿದೆ.

ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಪ್ರಮುಖರಾದ ಡಿ.ಕೆ.ಶಿವಕುಮಾರ್‌, ಸಿದ್ದರಾಮಯ್ಯ ಹಾಗೂ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸಮ್ಮುಖದಲ್ಲಿ ಈ ಸಭೆ ನಡೆಯಲಿದೆ.

ಪ್ರಥಮ ಹಂತದಲ್ಲಿ ಈಗಾಗಲೇ 130ರಿಂದ 150 ಕ್ಷೇತ್ರಗಳಿಗೆ ಒಂದೊಂದೇ ಅಭ್ಯರ್ಥಿ ಆಯ್ಕೆ ಮಾಡಿ ಸ್ಕ್ರೀನಿಂಗ್‌ ಕಮಿಟಿ ಸಭೆಯಲ್ಲೂ ಸಮ್ಮತಿ ಪಡೆಯಲಿದೆ. ಉಳಿದಂತೆ ಒಂದಕ್ಕಿಂತ ಹೆಚ್ಚು ಟಿಕೆಟ್‌ ಆಕಾಂಕ್ಷಿಗಳಿರುವ 70 ರಿಂದ 80 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಬಗ್ಗೆ ಈ ಸಭೆ ನಡೆಯಲಿದೆ.

ಪ್ರತಿಯೊಂದು ಕ್ಷೇತ್ರಕ್ಕೂ ಟಿಕೆಟ್‌ ಆಕಾಂಕ್ಷಿಗಳಾಗಿರುವ ಎಲ್ಲರನ್ನೂ ಒಟ್ಟಿಗೆ ಸೇರಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ಯಾರಿಗೆ ಟಿಕೆಟ್‌ ನೀಡಿದರೂ ಒಟ್ಟಾಗಿ ಕೆಲಸ ಮಾಡಿ ಪಕ್ಷ ಗೆಲ್ಲಿಸುವಂತೆ ಸೂಚನೆ ನೀಡುವುದೇ ಈ ಸಭೆಯ ಉದ್ದೇಶವಾಗಿದೆ.

ಲಿಂಗಾಯತರ ಪ್ರತ್ಯೇಕ ಸಭೆ
ಈ ಮಧ್ಯೆ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ನಿವಾಸದಲ್ಲಿ ಲಿಂಗಾಯತ ನಾಯಕರು ಸಭೆ ಸೇರಿ ಸಮಾಲೋಚನೆ ನಡೆಸಿರುವುದು ಅಚ್ಚರಿ ತಂದಿದೆ. ಈ ಸಭೆಯಲ್ಲಿ ಮಾಜಿ ಸಚಿವರಾದ ಎಂ.ಬಿ.ಪಾಟೀಲ್‌, ವಿನಯ ಕುಲಕರ್ಣಿ ಸಹಿತ ಅನೇಕರು ಭಾಗವಹಿಸಿದ್ದರು. ಈಗಾಗಲೇ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಈ ಸಲ ವೀರಶೈವ-ಲಿಂಗಾಯತ ಸಮಾಜದವರಿಗೆ 70ರಿಂದ 80 ಸೀಟು ಕೊಡಬೇಕೆಂದು ಬೇಡಿಕೆ ಸಲ್ಲಿಸಿದ್ದಾರೆ. ಮಂಗಳವಾರ, ಬುಧವಾರ ಅಭ್ಯರ್ಥಿ ಆಯ್ಕೆಗೆ ಸಭೆ ಸೇರುತ್ತಿರುವ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.


Spread the love

About Laxminews 24x7

Check Also

ಇಂದೋರಿಗೆ ತೆರಳಿದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗ…

Spread the love ಇಂದೋರಿಗೆ ತೆರಳಿದ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರ ನಿಯೋಗ… ತ್ಯಾಜ್ಯ ನಿರ್ವಹಣೆ ಮತ್ತು ಸ್ವಚ್ಛತಾ ಮಾದರಿಗಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ