Breaking News

ಆರೋಗ್ಯ ಇಲಾಖೆ’ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್ : ವೇತನ ಹೆಚ್ಚಳ, ಸೇವಾ ಭದ್ರತೆ ಕಡತ ಮಂಡಿಸಿ ಸಿಎಂ ಆದೇಶ

Spread the love

ಬೆಂಗಳೂರು: ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಆಧಾರದ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಮುಷ್ಕರ ನಡೆಸಿ ಒತ್ತಾಯಿಸಿದ್ದರು. ಇಂತಹ ನೌಕರರ ವೇತನ ಹೆಚ್ಚಳ ( Salary Hike ), ಸೇವಾ ಭದ್ರತೆ ಸೇರಿದಂತೆ ವಿವಿಧ ಡಿಕೆ ಈಡೇರಿಕೆಯ ಕಡತವನ್ನು ಮಂಡಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಆದೇಶಿಸಿದ್ದಾರೆ.

 

ಈ ಕುರಿತಂತೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದಿಂದ ಮುಖ್ಯಮಂತ್ರಿಯವರಿಗೆ ಸಲ್ಲಿಸರುವ ಮನವಿ ಪತ್ರವನ್ನು ಲಗತ್ತಿಸಲಾಗಿದೆ ಎಂದಿದ್ದಾರೆ.

ಆರೋಗ್ಯ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ ಹಾಗೂ ಸೇವಾ ಭದ್ರತೆಗೆ ಸಂಬಂಧಪಟ್ಟಂತೆ ವಿವಿಧ ಬೇಡಿಕೆಗಳನ್ನು ಪತ್ರದಲ್ಲಿ ನಮೂದಿಸಿ, ಅವುಗಳನ್ನು ಪರಿಹಸಿರುವಂತೆ ಕೋರಿದ್ದಾರೆ. ಆ ವಿಷಯಕ್ಕೆ ಸಂಬಂಧ ಪಟ್ಟ ಕಡತವನ್ನು ಮುಖ್ಯಮಂತ್ರಿಯವರ ಅವಗಾಹನೆಗೆ ಮಂಡಿಸುವಂತೆ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ