Breaking News

ನಾಳೆಯಿಂದ ಪಿಯು ಪರೀಕ್ಷೆ ಆರಂಭ:

Spread the love

ಬೆಂಗಳೂರು: ಮಾರ್ಚ್‌ 9ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗುತ್ತಿದ್ದು, ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ಮಾಡಿಕೊಂಡಿದೆ.

ಈ ಬಾರಿ 7,27,387 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದಾರೆ.

ಪರೀಕ್ಷೆ ನಡೆಯುವ ರಾಜ್ಯದ 1,109 ಕೇಂದ್ರಗಳಲ್ಲೂ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ, ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳ ಸುತ್ತ ಬಿಗಿ ಭದ್ರತೆ ಒದಗಿಸಲಾಗುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ. ಹಿಂದೆ ನಕಲು ಮಾಡಿದ್ದ ಪರೀಕ್ಷಾ ಕೇಂದ್ರಗಳಲ್ಲಿ ಕಣ್ಗಾವಲು ಇರಿಸಲಾಗಿದೆ. ಜಾಲತಾಣಗಳಲ್ಲಿ ವದಂತಿ ಹಬ್ಬಿಸದಂತೆ, ವದಂತಿಗಳನ್ನು ಹಬ್ಬಿಸುವ ಕಿಡಿಗೇಡಿಗಳ ಮೇಲೆ ನಿಗಾ ಇರಿಸಲು ಸೈಬರ್‌ ಕ್ರೈಂ ಅಧಿಕಾರಿಗಳು, ಸ್ಥಳೀಯ ಪೊಲೀಸರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ ಎಂದು ಮಂಡಳಿ ಮಾಹಿತಿ ನೀಡಿದೆ.

ಮೊಬೈಲ್‌ಫೋನ್, ಸ್ಮಾರ್ಟ್‌ವಾಚ್‌, ಇಯರ್‌ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ಸ್ ಸಾಧನಗಳನ್ನು ಪರೀಕ್ಷಾ ಕೇಂದ್ರದ ಒಳಗೆ ತೆಗೆದುಕೊಂಡು ಹೋಗದಂತೆ ನಿರ್ಬಂಧ ವಿಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಭದ್ರತಾ ಕಾರ್ಯ, ಪರೀಕ್ಷಾ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವ ಅಧಿಕಾರಿ, ಸಿಬ್ಬಂದಿಗೂ ಮೊಬೈಲ್‌ ಫೋನ್ ಬಳಕೆಗೆ ಕಡಿವಾಣ ಹಾಕಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಕ್ಯಾಮೆರಾ ಸೌಲಭ್ಯ ಇಲ್ಲದ ಮೊಬೈಲ್‌ಫೋನ್ ಬಳಸಲು ಅವಕಾಶ ನೀಡಲಾಗಿದೆ ಎಂದು ಪರೀಕ್ಷಾ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Dailyhunt

Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ