Breaking News

ನಾಳೆ ಕಿಡ್ನಿ ತಪಾಸಣಾ ಶಿಬಿರ K.L.E. ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ.

Spread the love

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಮೂತ್ರಪಿಂಡ ತಪಾಸಣಾ ಶಿಬಿರವನ್ನು ನಾಳೆ (ಮಾ.9) ಬೆಳಗ್ಗೆ 9 ರಿಂದ ಸಂಜೆ 1 ಗಂಟೆಯವರೆಗೆ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದೆ.

ಇದೇ ಸಂದರ್ಭದಲ್ಲಿ ಜಾಗೃತಿ ನಡಿಗೆ ಕಾರ್ಯಕ್ರಮ ಕೂಡ ಆಯೋಜಿಸಲಾಗಿದೆ.

ಶಿಬಿರದಲ್ಲಿ ತಪಾಸಣೆಗೊಳಪಡುವ ಕಿಡ್ನಿ ರೋಗಿಗಳ ರಕ್ತ ಪರೀಕ್ಷೆಯಲ್ಲಿ ಶೇ. 20ರಷ್ಟು ರಿಯಾಯತಿಯನ್ನು ನೀಡಲಾಗುವುದು. ಮೂತ್ರಪಿಂಡವನ್ನು ಸಮಗ್ರವಾಗಿ ಪರೀಕ್ಷಿಸಿ ಸೂಕ್ತ ಸಲಹೆಯನ್ನು ತಜ್ಞವೈದ್ಯರು ನೀಡಲಿದ್ದಾರೆ. ಆದ್ದರಿಂದ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಕೋರಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ಜನಸಂಪರ್ಕ ವಿಭಾಗ ಅಥವಾ ದೂ. 0831-2551302 ಅಥವಾ 9141080949 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ