Breaking News

6 ನಿಗಮಗಳಿಗೆ ನಿರ್ದೇಶಕರ ನೇಮಕ ಮಾಡಿದ ಸರ್ಕಾರ

Spread the love

ಬೆಂಗಳೂರು: ವಿಧಾನಸಭಾ ಚುನಾವಣೆ ಘೋಷಣೆಗೆ ಒಂದು ತಿಂಗಳು ಬಾಕಿಯಿರುವ ಹೊತ್ತಲ್ಲಿ ರಾಜ್ಯ ಸರ್ಕಾರ 6 ನಿಗಮಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ತವರು ಜಿಲ್ಲೆ ಹಾವೇರಿಯ 11 ಜನರನ್ನು ನಿಗಮಗಳಿಗೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಸಿಎಂ ಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ 6 ಜನರಿಗೆ ನಿಗಮದಲ್ಲಿ ಸ್ಥಾನ ನೀಡಲಾಗಿದೆ.

 

 

ದೇವರಾಜ್ ಅರಸು ಅಭಿವೃದ್ಧಿ ನಿಗಮ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಮರಾಠಾ ಅಭಿವೃದ್ಧಿ ನಿಗಮ, ಸವಿತಾ ಸಮಾಜ ಅಭಿವೃದ್ಧಿ ನಿಗಮ, ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಮತ್ತು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.


Spread the love

About Laxminews 24x7

Check Also

ಶಾಸಕ ವೀರೇಂದ್ರ ಬಂಧನ ಪ್ರಶ್ನಿಸಿ ಪತ್ನಿ ಸಲ್ಲಿಸಿದ್ದ ಅರ್ಜಿಯ ಆದೇಶ ಕಾಯ್ದಿರಿಸಿದ ಹೈಕೋರ್ಟ್

Spread the loveಬೆಂಗಳೂರು: ಆನ್​ಲೈನ್ ಮತ್ತು ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಅವರನ್ನು ಕಾನೂನುಬಾಹಿರವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ