Breaking News

ದೇವಲತ್ತಿ ಲೋಕೋಳಿ- ಲಕ್ಕೇಬೈಲ್ ಮಾರ್ಗದಿಂದ ವಿದ್ಯುತ್ ಸರಬರಾಜು:ಡಾ. ಸೋನಾಲಿ

Spread the love

ಬೆಳಗಾವಿ: ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮದ ಜನರ ಬಹುದಿನಗಳ ಬೇಡಿಕೆಯನ್ನು ಕೊನೆಗೂ ಈಡೇರಿಸಿ ಕೊಡುವಲ್ಲಿ ಬಿಜೆಪಿ ಗ್ರಾಮೀಣ ಉಪಾಧ್ಯಕ್ಷೆ ಡಾ. ಸೋನಾಲಿ ಸರ್ನೋಬತ್ ಯಶಸ್ವಿಯಾಗಿದ್ದಾರೆ.

ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮಕ್ಕೆ ವಿದ್ಯುತ್ ಸರಬರಾಜು ಆಗುತ್ತಿದ್ದರೂ ಈ ಮಾರ್ಗ ಪದೇ ಪದೇ ದುರಸ್ತಿಗೆ ಈಡಾಗುತ್ತಿರುವುದರಿಂದ ದೇವಲತ್ತಿ ಗ್ರಾಮದವರು ತೀವ್ರ ಸಮಸ್ಯೆ ಅನುಭವಿಸುವಂತಾಗಿತ್ತು. ಈ ಭಾಗದ ವಿದ್ಯಾರ್ಥಿಗಳು ವ್ಯಾಸಂಗಕ್ಕೆ ಪಡಿಪಾಟಲು ಪಡುವಂತಾಗಿತ್ತು.

ಹಾಗಾಗಿ ಈ ಜನರ ಸಮಸ್ಯೆ ಬಗ್ಗೆ ತಿಳಿದು ಜನರ ನೋವಿಗೆ ಸ್ಪಂದಿಸಿದ ಬಿಜೆಪಿ ನಾಯಕಿ ಡಾ. ಸೋನಾಲಿ ಸರ್ನೋಬತ್ ಈ ಬಗ್ಗೆ ಇಂಧನ ಸಚಿವ ಸುನೀಲ ಕುಮಾರ ಅವರಿಗೆ ಈ ಬಗ್ಗೆ ಪತ್ರ ಬರೆದು ಮನವಿ ಸಲ್ಲಿಸಿ ದೇವಲತ್ತಿ ಗ್ರಾಮಕ್ಕೆ ಈಗ ಇರುವ ಗರ್ಲಗುಂಜಿ ವಿದ್ಯುತ್ ಮಾರ್ಗವನ್ನು ಬದಲಾಯಿಸಿ ಲೋಕೋಳಿ- ಲಕ್ಕೇಬೈಲ್ ಮಾರ್ಗದಿಂದ ದೇವಲತ್ತಿ ಗ್ರಾಮಕ್ಕೆ ವಿದ್ಯುತ್ ಸರಬರಾಜು ಮಾಡುವಂತೆ ಕೋರಿದ್ದರು.

ದೇವಲತ್ತಿಯ ಜನರ ಸಂಕಷ್ಟವನ್ನು ಸಚಿವರಿಗೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಈ ಬಗ್ಗೆ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳುವಂತೆ ಇಂಧನ ಸಚಿವರು ಸೂಚನೆ ನೀಡಿದ್ದಾರೆ.

೨೦೨೨ರ ಡಿಸೆಂಬರ್ ೨೭ರಂದು ಡಾ. ಸೋನಾಲಿ ಸನೋಬತ್ ಇಂಧನ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯಪಾಲಕ ಅಭಿಯಂತರರು (ವಿ) ಕಾನೂನು ಪಾಲನೆ ವಿಭಾಗಕ್ಕೆ ಸಚಿವರು ಸೂಚನೆ ನೀಡಿದ್ದಾರೆ.

ಗ್ರಾಮೀಣ ವಿಭಾಗದಲ್ಲಿ ನಾಲ್ಕು ಲಿಂಕ್ ಲೈನ್ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ೯೩.೮೮ ಲಕ್ಷದಷ್ಟು ಬಂಡವಾಳ ಬಜೆಟ್ ಕೋರಿಕೆಯನ್ನು ವಲಯ ಕಚೇರಿಗೆ ಸಲ್ಲಿಸಿದ್ದಾರೆ. ಸದರಿ ಹೆಚ್ಚುವರಿ ಬಂಡವಾಳ ಬಜೆಟ್ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ. ಖಾನಾಪುರ ತಾಲ್ಲೂಕಿನ ದೇವಲತ್ತಿ ಗ್ರಾಮಕ್ಕೆ ಸಂಬಂಧಿಸಿದಂತೆ ಲಿಂಕ್ ಲೈನ್‌ಗೆ ೧೬.೫೨ ಲಕ್ಷ ಇದರಲ್ಲಿ ಸೇರಿದೆ. ಆಗಾಗಿ ಈ ೧೬.೫೨ ಲಕ್ಷಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ಬೆಳಗಾವಿ ವಲಯದ ಮುಖ್ಯ ಅಭಿಯಂತರರು ಹುವಿಸಂಕಂನಿ ಹುಬ್ಬಳ್ಳಿಯ ಪ್ರಧಾನ ವ್ಯವಸ್ಥಾಪಕರಿಗೆ ಮನವಿ ಮಾಡಿದ್ದು, ಇದೀಗ ಮೊತ್ತಕ್ಕೆ ಅನುಮೋದನೆ ಸಿಕ್ಕಿರುವುದರಿಂದ ಶೀಘ್ರವೇ ಕಾಮಗಾರಿ ಆರಂಭವಾಗಲಿದೆ.


Spread the love

About Laxminews 24x7

Check Also

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಅನಾಮಿಕನ ಮುಖವಾಡ ಕಳಚಿದ ಮಾಜಿ ಪತ್ನಿ

Spread the loveಮಂಡ್ಯ, (ಆಗಸ್ಟ್ 21): ನೂರಾರು ಶವ ಹೂತಿರುವುದಾಗಿ ಆರೋಪಿಸಿ ಧರ್ಮಸ್ಥಳ ಪ್ರಕರಣವನ್ನು (Dharmasthala Case) ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಲು ಕಾರಣವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ