ಮಂಡ್ಯ: ಮಂಡ್ಯ ತಾಲೂಕಿನ ಹನಕೆರೆ ಗ್ರಾಮದ ಬಳಿ 118 ಕಿ.ಮೀ. ಉದ್ದದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಯನ್ನು ಪ್ರಧಾನಿ ಮೋದಿ ಅಧಿಕೃತವಾಗಿ ಉದ್ಘಾಟನೆ ಮಾಡಿದ್ದಾರೆ.
8,479 ಕೋಟಿ ರೂ. ವೆಚ್ಚದಲ್ಲಿ ಎಕ್ಸ್‌ಪ್ರೆಸ್ ಹೈವೇ ನಿರ್ಮಾಣವಾಗಿದೆ.
ಹೈವೇ ಉದ್ಘಾಟನೆ ವೇಳೆ ಪ್ರಧಾನಿ ಮೋದಿಗೆ ಕಲಾತಂಡಗಳಿಂದ ಸ್ವಾಗತ ಕೋರಲಾಯಿತು. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಧಾನಿ ಮೋದಿಯವನ್ನು ಸನ್ಮಾನಿಸಿದ್ದಾರೆ.
ಇನ್ನು ಪ್ರಧಾನಮಂತ್ರಿಯವರು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು ದೇಶಕ್ಕೆ ಸಮರ್ಪಿಸುವರು. ಈ ಯೋಜನೆಯು ರಾಷ್ಟ್ರೀಯ ಹೆದ್ದಾರಿ 275 ರ ಬೆಂಗಳೂರು-ನಿಡಘಟ್ಟ-ಮೈಸೂರು ವಿಭಾಗವನ್ನು 6 ಪಥದಲ್ಲಿ ಅಭಿವೃದ್ಧಿಪಡಿಸುವುದನ್ನು ಒಳಗೊಂಡಿದೆ.
118 ಕಿ.ಮೀ ಉದ್ದವನ್ನು ಹೊಂದಿದೆ. ಈ ಯೋಜನೆಯನ್ನು ಸುಮಾರು 8480 ಕೋಟಿ ರೂ.ಗಳ ಒಟ್ಟು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು ಬೆಂಗಳೂರು- ಮೈಸೂರು ನಡುವೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುತ್ತದೆ. ಬೆಂಗಳೂರು ಮತ್ತು ಮೈಸೂರು ನಡುವೆ ಸುಮಾರು 3 ಗಂಟೆಗಳಿಂದ ಸುಮಾರು 75 ನಿಮಿಷಗಳವರೆಗೆ ಈ ಎಕ್ಸ್ ಪ್ರೆಸ್ ವೇ ಮೂಲಕ ತಲುಪಬಹುದಾಗಿದೆ.
Laxmi News 24×7