ಬೆಳಗಾವಿ: ಇಲ್ಲಿನ ಶಹಾಪುರದ ಛತ್ರಪತಿ ಶಿವಾಜಿ ಉದ್ಯಾನವನ ಬಳಿ ಮಾ.16ರಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಕನಸಿನ ಕೂಸಾದ ‘ಶಿವಚರಿತ್ರ’ ಉದ್ಘಾಟನಾ ಸಮಾರಂಭ ನಡೆಯಲಿದೆ.
ಸಂಜೆ 5.30ಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉದ್ಘಾಟಿಸಲಿದ್ದಾರೆ. ಇನ್ನೂ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.