ಮಂಡ್ಯ : ವಿಧಾನಸಭೆ ಚುನಾವಣೆ ಹೊತ್ತಲ್ಲೇ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಬಿಗ್ ಶಾಕ್ ತಗುಲಿದ್ದು, ಬಿಜೆಪಿ ಮುಖಂಡ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಉದಯ್ ಗೌಡ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಸಭೆ ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಆರಂಭವಾಗಿದೆ. ಮದ್ದೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಉದಯ್ ಗೌಡ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಹೆಚ್ ಡಿ ಕುಮಾರಸ್ವಾಮಿ ಜೊತೆಯಲ್ಲಿದ್ದ ವೇಳೆ ಅವರಿಗೆ ನಾವು ಕೆಡಕು ಬಯಸಿದ್ರೆ ದೇವರು ನಮಗೆ ಶಿಕ್ಷೆ ಕೊಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾಗಮಂಗಲದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿಕೆಶಿ ನಾವು ಕುಮಾರಸ್ವಾಮಿ ಜೊತೆ ಶಕ್ತಿಯಾಗಿ ನಿಂತುಕೊಂಡು ಸಹಾಯ ಮಾಡಿದ್ದೇವೆ, ನಮಗೆ ಸಿಕ್ಕ ಅವಕಾಶದಲ್ಲಿ ಕುಮಾರಸ್ವಾಮಿಗೆ ಸಿಎಂ ಮಾಡಿದೆವು ಎಂದಿದ್ದಾರೆ.
ಕುಮಾರಸ್ವಾಮಿ ಅವರು ಸ್ತ್ರೀ ಶಕ್ತಿ ಸಾಲಮನ್ನಾ ಮಾಡುತ್ತೇನೆ ಎಂದು ಹೇಳಿ ಮಾಡಲಿಲ್ಲ, ಸಾಲಮನ್ನಾ ಮಾಡದೇ ಇದ್ರೂ ಪರ್ವಾಗಿಲ್ಲ, ಸುಳ್ಖು ಹೇಳಬೇಡಿ ಎಂದು ಹೇಳಿದ್ದಾರೆ.
Laxmi News 24×7