Breaking News

ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಾವಕಾಶ- ನಾಳೆಯೊಳಗೆ ಅರ್ಜಿ ಹಾಕಿ

Spread the love

BMRCL Recruitment 2023: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್(Bengaluru Metro Rail Corporation Limited) ಅಂದರೆ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ​ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಹಾಕಲು ನಾಳೆಯೇ ಕೊನೆಯ ದಿನವಾಗಿದೆ. ಒಟ್ಟು 10 ಫೈಯರ್ ಇನ್ಸ್​ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಮಾರ್ಚ್​ 14, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ (Last Date). ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​bmrc.co.inಗೆ ಭೇಟಿ ನೀಡಬಹುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್
ಹುದ್ದೆ ಫೈಯರ್ ಇನ್ಸ್​ಪೆಕ್ಟರ್, ಅಸಿಸ್ಟೆಂಟ್ ಎಂಜಿನಿಯರ್
ಒಟ್ಟು ಹುದ್ದೆ 10
ವಿದ್ಯಾರ್ಹತೆ ಡಿಪ್ಲೊಮಾ, ಬಿಇ/ಬಿ.ಟೆಕ್
ವೇತನ ಮಾಸಿಕ ₹ 50,000-1,40,000
ಉದ್ಯೋಗದ ಸ್ಥಳ ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್​ 14, 2023

ಹುದ್ದೆಯ ಮಾಹಿತಿ:
ಫೈಯರ್ ಇನ್ಸ್​ಪೆಕ್ಟರ್ – 4
ಡೆಪ್ಯುಟಿ ಚೀಫ್ ಎಂಜಿನಿಯರ್ (ಸೇಫ್ಟಿ & ಹೆಲ್ತ್)- 1
ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್ (ಸೇಫ್ಟಿ & ಹೆಲ್ತ್)- 2
ಅಸಿಸ್ಟೆಂಟ್ ಎಂಜಿನಿಯರ್ (ಸೇಫ್ಟಿ & ಹೆಲ್ತ್)- 3

ವಿದ್ಯಾರ್ಹತೆ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಮೆಕ್ಯಾನಿಕಲ್​​ನಲ್ಲಿ ಡಿಪ್ಲೊಮಾ, ಬಿಇ/ಬಿ.ಟೆಕ್ (ಸಿವಿಲ್/ಮೆಕ್ಯಾನಿಕಲ್/ಎನ್ವಿರಾನ್​ಮೆಂಟ್) ಪೂರ್ಣಗೊಳಿಸಿರಬೇಕು.

ವಯೋಮಿತಿ:
ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 55 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:
ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ವೇತನ:
ಮಾಸಿಕ ₹ 50,000-1,40,000

ಉದ್ಯೋಗದ ಸ್ಥಳ:
ಬೆಂಗಳೂರು

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್​ಗಳ ಮೇಲೆ ಕ್ಲಿಕ್ ಮಾಡಿ.

ಫೈಯರ್ ಇನ್ಸ್​ಪೆಕ್ಟರ್ – ಇಲ್ಲಿ ಕ್ಲಿಕ್ ಮಾಡಿ
ಡೆಪ್ಯುಟಿ ಚೀಫ್ ಎಂಜಿನಿಯರ್, ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಎಂಜಿನಿಯರ್, ಅಸಿಸ್ಟೆಂಟ್ ಎಂಜಿನಿಯರ್- ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 14, 2023
ಆಫ್​ಲೈನ್​/ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ- ಮಾರ್ಚ್​ 18, 2023 ಸಂಜೆ 4 ಗಂಟೆಯವರೆಗೆ

ಅಭ್ಯರ್ಥಿಗಳು ಪೋಸ್ಟ್​/ ಆಫ್​ಲೈನ್ ಮೂಲಕವೂ ಅರ್ಜಿ ಹಾಕಬಹುದು. ಅದಕ್ಕೆ ಅಭ್ಯರ್ಥಿಗಳು ಮಾಡಬೇಕಿರೋದು ಇಷ್ಟೇ. ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.

ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್
3ನೇ ಮಹಡಿ
BMTC ಕಾಂಪ್ಲೆಕ್ಸ್
K.H. ರಸ್ತೆ
ಶಾಂತಿನಗರ
ಬೆಂಗಳೂರು – 560027


Spread the love

About Laxminews 24x7

Check Also

ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ

Spread the love ಚಾತುರ್ಮಾಸ ಹಿನ್ನೆಲೆ ಜೈನ ಮುನಿ ಶಿಷ್ಯೆಯರ ಪುರಪ್ರವೇಶ ಬೆಳಗಾವಿ ಜೈನ ಸಮಾಜದಿಂದ ಭವ್ಯ ಮೆರವಣಿಗೆಯೊಂದಿಗೆ ಸ್ವಾಗತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ