Breaking News

ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ: ಕಾಗೇರಿ

Spread the love

ಶಿರಸಿ: ‘ಶಿರಸಿ-ಸಿದ್ದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿಯಿಂದ ನಾನೇ ಅಭ್ಯರ್ಥಿ. ಯಾರಿಗೂ ಅನುಮಾನ ಬೇಡ’ ಎಂದು ವಿಧಾನಸಭಾಧ್ಯಕ್ಷ ಹಾಗೂ ಸ್ಥಳೀಯ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಸಿದ್ದಾಪುರದಲ್ಲಿ ಕೆಲವರಿಂದ ವಿರೋಧ ವ್ಯಕ್ತವಾದರೂ ಅದು ಸಾಮಾನ್ಯ.

ಅದನ್ನು ಶಮನ ಮಾಡು ವುದು ನನಗೆ ತಿಳಿದಿದೆ’ ಎಂದು ಹೇಳಿದರು.

‘ವಿಧಾನಸಭಾಧ್ಯಕ್ಷನಾದ ನಂತರ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದೆ. ಇದರಿಂದ ಕ್ಷೇತ್ರದಲ್ಲಿ ಹೆಚ್ಚಿನ ವ್ಯತ್ಯಾಸ ಆಗದಿದ್ದರೂ ಪಕ್ಷದ ವಲಯದಲ್ಲಿ ಸಂಪರ್ಕ ಸಮಸ್ಯೆ ಆಗಿತ್ತು. ಮತದಾರರ ಬಳಿಯೂ ಪಕ್ಷದ ಚಟುವಟಿಕೆ ತಿಳಿಸಲು ತೊಡಕಾಗಿತ್ತು. ಹೀಗಾಗಿ ಅಧಿವೇಶನ ಮುಕ್ತಾಯ ಆಗುತ್ತಿದ್ದಂತೆ ತಜ್ಞರ ಜೊತೆ ಸಮಾಲೋಚಿಸಿ ಸಕ್ರಿಯ ರಾಜಕಾರಣದತ್ತ ಮುಖ ಮಾಡಿದ್ದೇನೆ’ ಎಂದು ತಿಳಿಸಿದರು.

3 ವರ್ಷ 10 ತಿಂಗಳುಗಳಿಂದ ಪಕ್ಷದ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಂಡಿದ್ದ ಅವರು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮತ್ತೆ ರಾಜಕಾರಣಕ್ಕೆ ಮರಳಿದರು. ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಪಕ್ಷೇತರ ಆಕಾಂಕ್ಷಿಗಳ ಪಟ್ಟಿ ಕೇಳಿ ಪಡೆದರು.


Spread the love

About Laxminews 24x7

Check Also

ಡ್ರಂಕ್​​ & ಡ್ರೈವ್:​ 36 ಶಾಲಾ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲು

Spread the love ಬೆಂಗಳೂರು: ಮದ್ಯ ಸೇವಿಸಿ ಶಾಲಾ ವಾಹನಗಳನ್ನು ಓಡಿಸುವ​ ಚಾಲಕರ ವಿರುದ್ಧ ನಗರ ಪಶ್ಚಿಮ ವಿಭಾಗದ ಪೊಲೀಸರು ವಿಶೇಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ