ಬೆಳಗಾವಿ: ಬೆಳಗಾವಿ ಜಿಲ್ಲೆಯ ವಿವಿಧೆಡೆ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್ ಪ್ರಜಾಧ್ವನಿ ಕಾರ್ಯಕ್ರಮ ಮತ್ತೊಮ್ಮೆ ಮುಂದೂಡಲ್ಪಟ್ಟಿದೆ.
ಇದೇ 20ರಂದು ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಇದೇ 17ರಿಂದ ಗೋಕಾಕ, ಹಾರೂಗೇರಿ, ಅಥಣಿ, ಕಾಗವಾಡ (ಮದಬಾವಿ), ಕಂಕನವಾಡಿ, ಕಾಕತಿ ಮೊದಲಾದ ಕಡೆಗಳಲ್ಲಿ ಪ್ರಜಾ ಧ್ವನಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ರಾಹುಲ ಗಾಂಧಿ ಭೇಟಿ ನಿಗದಿಯಾಗಿದ್ದರಿಂದ ಎಲ್ಲವನ್ನೂ ಮುಂದೂಡಲಾಗಿದೆ.
ಈ ಹಿಂದೆ ಸಹ ಬೆಳಗಾವಿ ಜಿಲ್ಲೆಯ ಗೋಕಾಕ, ಅರಬಾವಿ ಸೇರಿದಂತೆ ಈ ಎಲ್ಲ ಪ್ರದೇಶಗಳಲ್ಲಿ ಪ್ರಜಾಧ್ವನಿ ಸಮಾವೇಶ ನಿಗದಿಯಾಗಿ ರದ್ದಾಗಿತ್ತು.
Laxmi News 24×7