Breaking News

ರಾಜ್ಯದ ವಿವಿಧೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ

Spread the love

ಬೆಂಗಳೂರು: ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ರಾಜ್ಯದ ವಿವಿಧೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕನಿಷ್ಠ ಉಷ್ಣಾಂಶವು ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿಯೂ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.


Spread the love

About Laxminews 24x7

Check Also

ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveಆನಂದ್ ನಗರದಲ್ಲಿ ೩೦ ಕೋಟಿ ರೂಪಾಯಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಎನ್.ಸಿ.ಡಿ.ಎಫ್.ಐ ಕಚೇರಿಯ ಕಟ್ಟಡವನ್ನು ಉದ್ಘಾಟಿಸಿದ ಕೇಂದ್ರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ